ಸೋಮವಾರ, ಅಕ್ಟೋಬರ್ 19, 2020
24 °C

ಗಜೇಂದ್ರಗಡ: ಅಧ್ಯಕ್ಷ, ಉಪಾಧ್ಯಕ್ಷ ಪಟ್ಟಕ್ಕೆ ಪೈಪೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಜೇಂದ್ರಗಡ: ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರೂ ಸಹ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮಿಸಲಾತಿ ಗೊಂದಲದಿಂದ ಕಳೆದೆರಡು ವರ್ಷಗಳಿಂದ ರಾಜಕೀಯ ಪಕ್ಷಗಳಿಗೆ ಅಧಿಕಾರ ಭಾಗ್ಯ ಲಭಿಸಿರಲಿಲ್ಲ. ಇದೀಗ ರಾಜ್ಯ ಸರ್ಕಾರ ಮಿಸಲಾತಿ ಪಟ್ಟಿ ಪ್ರಕಟಿಸಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಪಟ್ಟ ಯಾರಿಗೆ ಲಭಿಸುತ್ತದೆ ಎಂಬ ಚರ್ಚೆಗಳು ಗರಿಗೆದರಿವೆ.

ಪಟ್ಟಣದ ಪುರಸಭೆಯ 23 ವಾರ್ಡ್‌ಗಳಿಗೆ ಕಳೆದೆರಡು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 18, ಕಾಂಗ್ರೆಸ್ ಬೆಂಬಲಿತ 5 ಮಂದಿ ಆಯ್ಕೆಯಾಗಿದ್ದಾರೆ.  ಬಿಜೆಪಿಯಲ್ಲಿ ಒಂಬತ್ತು ಪುರುಷ ಹಾಗೂ ಒಂಬತ್ತು ಮಹಿಳಾ ಸದಸ್ಯರು ಇದ್ದಾರೆ.

ಇದೀಗ ಪ್ರಕಟವಾಗಿರುವ ಮಿಸಲಾತಿಯ ಅನ್ವಯ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ  ಹಿಂದುಳಿದ ವರ್ಗ ‘ಅ’ ಮಹಿಳೆಗೆ ಮೀಸಲಾಗಿದೆ. 

ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮಿಸಲಾಗಿರುವುದರಿಂದ ಪುರುಷ ಹಾಗೂ ಮಹಿಳಾ ಸದಸ್ಯರು ಸ್ಪರ್ಧಿಯಾಗಲಿದ್ದಾರೆ. ಆದರೆ ಪುರಸಭೆಯ ಹಿಂದಿನ ಎರಡು ಅವಧಿಗೆ ಅಧ್ಯಕ್ಷ ಸ್ಥಾನ ಮಹಿಳೆಯರಿಗೆ ದೊರಕಿತ್ತು. ಹೀಗಾಗಿ ಈ ಬಾರಿ ಅಧ್ಯಕ್ಷ ಸ್ಥಾನದ ಮೇಲೆ ಪುರುಷರು ಕಣ್ಣಿಟ್ಟಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು