ಶುಕ್ರವಾರ, ಸೆಪ್ಟೆಂಬರ್ 25, 2020
29 °C

ಶಿರಹಟ್ಟಿ: ಕೆಸರು ಗದ್ದೆಯಂತಾದ ರಸ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಹಟ್ಟಿ: ಇತ್ತಿಚಿಗೆ ಸುರಿದ ಮಳೆಗೆ ಪಟ್ಟಣದ ವಿಜಯನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಸಂಚಾರವೇ ಸಾಧ್ಯವಿಲ್ಲ ಎಂದು ವಾಹನ ಸವಾರರು ಹೇಳುತ್ತಾರೆ.

ವಾಹನಗಳು ಮಾತ್ರವಲ್ಲ ನಡೆದುಕೊಂಡು ಹೋಗಲು ಸಹ ಹರಸಾಹಸ ಪಡಬೇಕಾದ ಸ್ಥಿತಿ ಇದೆ. ಜಾರಿ ಬಿದ್ದರೆ ಕೈಕಾಲು ಮುರಿಯುವುದು ಖಚಿತ ಎನ್ನುತ್ತಾರೆ ಸ್ಥಳೀಯರು.

ಮಳೆ ಬಂದರೆ ಕೆಸರು ಗದ್ದೆ, ಬೇಸಿಗೆ ಬಂದರೆ ದೂಳಿನಿಂದ ಆವೃತವಾಗುವ ರಸ್ತೆಯನ್ನು ಅಭಿವೃದ್ಧಿ ಮಾಡುವಂತೆ ಹಲವು ಬಾರಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಜನಪ್ರತಿ
ನಿಧಿಗಳಿಗೆ ಜನರ ಸಮಸ್ಯೆ ಬಗೆಹರಿಸುವ ಮನಸ್ಸಿಲ್ಲ ಎಂದು ಇಲ್ಲಿನ ನಿವಾಸಿಗಳಾದ ಮಲ್ಲಿಕಾರ್ಜುನ, ಮುಸ್ತಾಕ ಶಿಗ್ಲಿ ಬೇಸರ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.