ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮ ಸಡಿಲಿಕೆ: ಮೊದಲ ದಿನ ಜನಸಂದಣಿ

Last Updated 21 ಜೂನ್ 2021, 16:07 IST
ಅಕ್ಷರ ಗಾತ್ರ

ಗದಗ: ಹೊಸ ಪ್ರಕರಣಗಳ ಸಂಖ್ಯೆ ಶೇ 5ಕ್ಕಿಂತ ಕಡಿಮೆ ಇರುವ ಕಾರಣ ಜಿಲ್ಲೆಯಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಿದ್ದರಿಂದಾಗಿ ಸೋಮವಾರ ಗದಗ ಬೆಟಗೇರಿ ಅವಳಿ ನಗರದ ತುಂಬ ಜನದಟ್ಟಣೆ ಕಂಡುಬಂತು.

ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ಎಲ್ಲ ಬಗೆಯ ಅಂಗಡಿಗಳು ವ್ಯಾಪಾರ ವಹಿವಾಟು ನಡೆಸಿದವು. ಹೋಟೆಲ್‌ಗಳು ಕೂಡ ತೆರೆದಿದ್ದವು.

ನಗರದ ತರಕಾರಿ ಮಾರುಕಟ್ಟೆ, ದಿನಸಿ ಅಂಗಡಿಗಳು, ರಸಗೊಬ್ಬರ ಮತ್ತು ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರು. ಪ್ರತಿ ರಸ್ತೆಗಳಲ್ಲೂ ಜನಸಂದಣಿ, ವಾಹನ ಸಂಚಾರ ಹೆಚ್ಚಾಗಿತ್ತು. ಸ್ಟೇಶನ್ ರಸ್ತೆ ಸೇರಿದಂತೆ ಕೆಲವು ಪ್ರಮುಖ ಸ್ಥಳಗಳಲ್ಲಿ ಸಂಚಾರ ದಟ್ಟಣೆ ಕಂಡು ಬಂತು.

ಬಹಳ ದಿನಗಳ ನಂತರ ಸಾರಿಗೆ ಸಂಸ್ಥೆಯ ಬಸ್ ಸಂಚರಿಸಿದವು. ನಗರದ ಪುಟ್ಟರಾಜ ಗವಾಯಿ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣಗಳಲ್ಲಿ ಮೊದಲ ದಿನವಾದ ಸೋಮವಾರ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT