ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ | ಚುನಾವಣಾ ವೀಕ್ಷಕರ ಭೇಟಿ, ಅಧಿಕಾರಿಗಳ ಜತೆ ಸಭೆ

Published 23 ಏಪ್ರಿಲ್ 2024, 15:45 IST
Last Updated 23 ಏಪ್ರಿಲ್ 2024, 15:45 IST
ಅಕ್ಷರ ಗಾತ್ರ

ಗದಗ: ಲೋಕಸಭಾ ಚುನಾವಣಾ ಅಂಗವಾಗಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕ ಇ.ಶರವಣ ವೇಲ್‌ರಾಜ್, ಪೊಲೀಸ್‌ ವೀಕ್ಷಕರಾದ ಎಂ.ಆರ್ಶಿ, ವೆಚ್ಚ ವೀಕ್ಷಕ ಇಫ್ತಿಕಾರ್ ಅಹಮ್ಮದ್ ಅವರು ನಗರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಲೋಕಸಭಾ ಚುನಾವಣಾ ಸಿದ್ಧತೆ ಸಂಬಂಧಿಸಿದಂತೆ ಮಂಗಳವಾರ ಮಾಹಿತಿ ಪಡೆದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ನಿಯಂತ್ರಣ ಕೊಠಡಿ ವೀಕ್ಷಿಸಿದ ನಂತರ ನಡೆದ ಸಭೆಯಲ್ಲಿ ಮಾತನಾಡಿದ ಸಾಮಾನ್ಯ ವೀಕ್ಷಕ ಇ.ಶರವಣ ವೇಲ್‌ರಾಜ್ ನರುಗುಂದ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ವಿವರ, ಯುವ ಮತದಾರರ ಸಂಖ್ಯೆ, ಮತಗಟ್ಟೆಗಳ ವಿವರ, ಅಂಚೆ ಮತಪತ್ರ, ವಿದ್ಯುನ್ಮಾನ ಮತಯಂತ್ರ, ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಸೇರಿದಂತೆ ಹಲವು ಮಾಹಿತಿ ಪಡೆದರು.

ಪೊಲೀಸ್ ವೀಕ್ಷಕರಾದ ಎಂ.ಆರ್‌ಸಿ, ಲೋಕಸಭಾ ಚುನಾವಣೆಯನ್ನು ನಿಷ್ಪಕ್ಷಪಾತ ಮತ್ತು ಶಾಂತಿಯುತ ನಡೆಸಬೇಕು ಎಂದು ಹೇಳಿದರು.

ಮತಗಟ್ಟೆ ಕೇಂದ್ರಗಳಲ್ಲಿ ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ನರುಗುಂದ ವಿಧಾನಸಭಾ ಕ್ಷೇತ್ರದಲ್ಲಿನ ಮತದಾರರ ಸಂಖ್ಯೆ, ಯುವ ಮತದಾರರ ಸಂಖ್ಯೆ, ಮತಗಟ್ಟೆ ವಿವರ, ವಿದ್ಯುನ್ಮಾನ ಮತಯಂತ್ರ, ಭದ್ರತಾ ಕೊಠಡಿ, ಮತಗಟ್ಟೆ ಅಧಿಕಾರಿಗಳ ನಿಯೋಜನೆ, ಮೈಕ್ರೋ ವೀಕ್ಷಕರ ನೇಮಕ, ಅಂಚೆ ಮತದಾನ ಸೇರಿದಂತೆ ಲೋಕಸಭಾ ಚುನಾವಣೆ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಅವರು ಚೆಕ್‌ಪೋಸ್ಟ್‌ಗಳ ಸಂಖ್ಯೆ, ಪೊಲೀಸರ ನಿಯೋಜನೆ ಸೇರಿದಂತೆ ಚುನಾವಣೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್. ಮಾತನಾಡಿ, ಜಿಲ್ಲೆಯಲ್ಲಿ ಶೇಕಡವಾರು ಮತದಾನ ಹೆಚ್ಚಳಕ್ಕೆ ಸಂಬಂಧಿಸಿದಂತೆ ವಿವಿಧ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಲೆಕ್ಕಾಧಿಕಾರಿ ಅಮಿನ್‌ಸಾಬ್ ಅತ್ತಾರ, ನಿಯಂತ್ರಣ ಕೊಠಡಿಯ ನೋಡಲ್ ಅಧಿಕಾರಿ ಸೈಯದ್ ಸೇರಿದಂತೆ ವಿವಿಧ ವಿಭಾಗದ ನೋಡಲ್ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT