ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ | ಕಾರ್ಯಕರ್ತರ ಸಭೆ: ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭಾಗಿ

Published 17 ಮಾರ್ಚ್ 2024, 12:43 IST
Last Updated 17 ಮಾರ್ಚ್ 2024, 12:43 IST
ಅಕ್ಷರ ಗಾತ್ರ

ಗದಗ: ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಗದುಗಿಗೆ ಭೇಟಿ ನೀಡಿ ಕಾರ್ಯಕರ್ತರ ಜತೆಗೆ ಸಭೆ ನಡೆಸಲಿದ್ದಾರೆ.

ಬೆಳಿಗ್ಗೆ 11ಕ್ಕೆ ರೋಣ ವಿಧಾನಸಭಾ ಕ್ಷೇತ್ರದ ಸಭೆಯು ಗಜೇಂದ್ರಗಡದಲ್ಲಿರುವ ಮಾಜಿ ಶಾಸಕ ಕಳಕಪ್ಪ ಬಂಡಿ ಅವರ ನಿವಾಸದ ಆವರಣದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ.

ಮಧ್ಯಾಹ್ನ 2ಕ್ಕೆ ಗದಗ ನಗರದ ಹುಬ್ಬಳ್ಳಿ ರಸ್ತೆಯಲ್ಲಿರುವ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಲಯದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ.

ಅದೇ ರೀತಿ, ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಸಭೆಯು ಸಂಜೆ 4ಕ್ಕೆ ಲಕ್ಷ್ಮೇಶ್ವರದಲ್ಲಿ ನಡೆಯಲಿದೆ ಎಂದು ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ಪ್ರಧಾನ ಕಾರ್ಯದರ್ಶಿ ಫಕ್ಕಿರೇಶ ರಟ್ಟಿಹಳ್ಳಿ, ಲಿಂಗರಾಜ ಪಾಟೀಲ, ಆರ್.ಕೆ.ಚವ್ಹಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT