ಕ್ರಾಂತಿ ಸೇನಾ ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಬಾಕಳೆ ಮಾತನಾಡಿ, ‘ದೇಶದಲ್ಲಿ ಸಾಕಷ್ಟು ಹಿಂದೂ ಯುವತಿಯರು ಲವ್ ಜಿಹಾದ್‌ಗೆ ಬಲಿಯಾಗಿ ಜೀವನ ಹಾಳು ಮಾಡಿಕೊಂಡ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಆದಕಾರಣ, ಯುವತಿಯರು ಲವ್ ಜಿಹಾದ್‌ಗೆ ಕಡಿವಾಣ ಹಾಕಿ, ತಡೆಯುವಂತಹ ಪ್ರಯತ್ನವನ್ನೂ ಮಾಡಬೇಕು’ ಎಂದು ಹೇಳಿದರು.