7

ಮಹಾಗಣಪತಿಗೆ ಜಿಲ್ಲಾ ಯುವ ವಿಜ್ಞಾನಿ ಪುರಸ್ಕಾರ

Published:
Updated:
ಮಹಾಗಣಪತಿ ಬಿಳಿಮಗ್ಗದ

ಮುಂಡರಗಿ: ಉಪನಿರ್ದೇಶಕರ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ರಾಜ್ಯ ವಿಜ್ಞಾನ ಪರಿಷತ್ತುಗಳು ಗದುಗಿನಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಪರೀಕ್ಷೆಯಲ್ಲಿ ಸ್ಥಳೀಯ ಜಗದ್ಗುರು ಅನ್ನದಾನೀಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮಹಾಗಣಪತಿ ಬಿಳಿಮಗ್ಗದ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಯುವ ವಿಜ್ಞಾನಿ ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ.

ಯುವ ವಿಜ್ಞಾನಿ ಪುರಸ್ಕಾರಕ್ಕಾಗಿ ಜಿಲ್ಲೆಯ ಕಾಲೇಜು ಹಾಗೂ ಪ್ರೌಢಶಾಲೆಯ ಆಯ್ದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಲಿಖಿತ ಪರೀಕ್ಷೆ, ವಿಜ್ಞಾನ ವಸ್ತು ಪ್ರದರ್ಶನ, ವಿಷಯ ಮಂಡನೆ ಹಾಗೂ ವಿದ್ಯಾರ್ಥಿಗಳ ಸಾಧನೆ ಹಾಗೂ ಯೋಜನೆಗಳ ಆಧಾರದ ಮೇಲೆ ಅಂತಿಮವಾಗಿ ಮೂವರು ವಿಜೇತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. ಅದರಲ್ಲಿ ಮಹಾಗಣಪತಿ ಬಿಳಿಮಗ್ಗದ ಪ್ರಥಮ ಸ್ಥಾನ ಪಡೆದಕೊಂಡು ಜಿಲ್ಲಾ ಯುವ ವಿಜ್ಞಾನಿ ಪುರಸ್ಕಾರಕ್ಕೆ ಆಯ್ಕೆಯಾದರು.

ಜಿಲ್ಲಾ ಯುವ ವಿಜ್ಞಾನಿ ಪುರಸ್ಕಾರ ಪಡೆದ ವಿದ್ಯಾರ್ಥಿಗೆ ಡಾ.ಅನ್ನದಾನೀಶ್ವರ ಸ್ವಾಮೀಜಿ. ಪ್ರಾಚಾರ್ಯ ಸಿ.ಎಸ್.ಅರಸನಾಳ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !