ಲಕ್ಷ್ಮೇಶ್ವರ: ತಾಲ್ಲೂಕಾಡಳಿತ, ತಾಲ್ಲೂಕು ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ತಾಲ್ಲೂಕು ಮಹರ್ಷಿ ವಾಲ್ಮೀಕಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಅ.28ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.3ರ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಜರುಗಲಿದೆ.
ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್‍ಕೆ. ಪಾಟೀಲ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ, ಶಾಸಕ ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಸಲೀಂ ಅಹಮ್ಮದ್, ಸಂಸದ ಶಿವಕುಮಾರ ಉದಾಸಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಪುರಸಭೆ ಆಡಳಿತಾಧಿಕಾರಿ ವೆಂಕಟೇಶ ನಾಯ್ಕ, ತಾಲ್ಲೂಕು ಮಹರ್ಷಿ ವಾಲ್ಮೀಕಿ ಸಂಘದ ಅಧ್ಯಕ್ಷ ಭೀಮಣ್ಣ ಯಂಗಾಡಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಗೀತಾ ಕರೆಮ್ಮನವರ ಉಪನ್ಯಾಸ ನೀಡುವರು.
ಸಮಾರಂಭಕ್ಕೂ ಮುನ್ನ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಪಟ್ಟಣದ ಮಹಾಕವಿ ಪಂಪ ವೃತ್ತದಿಂದ ಆರಂಭವಾಗುವ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.