ಮಂಗಳವಾರ, ಸೆಪ್ಟೆಂಬರ್ 17, 2019
24 °C

ಮಲಪ್ರಭಾ ನದಿ ವ್ಯಾಪ್ತಿಯಲ್ಲಿ ಮತ್ತೆ ಪ್ರವಾಹ ಭೀತಿ: ಜನರ ಸ್ಥಳಾಂತರ

Published:
Updated:

ಗದಗ: ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವುದರಿಂದ ಜಿಲ್ಲೆಯ ಕೊಣ್ಣೂರು, ಹೊಳೆ ಆಲೂರು ವ್ಯಾಪ್ತಿಯಲ್ಲಿ ನದಿ ತುಂಬಿ ಹರಿಯುತ್ತಿದೆ.

ಜಲಾಶಯದಿಂದ ಹೆಚ್ಚಿನ ನೀರು ಬಿಡುವ ಸಾಧ್ಯತೆ ಇರುವುದರಿಂದ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇರುವ ನವಲಗುಂದ ತಾಲ್ಲೂಕಿನ ಲಕಮಾಪುರ, ಕೊಣ್ಣೂರು, ವಾಸನ ಹಾಗೂ ರೋಣ ತಾಲ್ಲೂಕಿನ ಮೆಣಸಗಿ, ಕುರುವಿನಕೊಪ್ಪ, ಅಮರಗೋಳ, ಹೊಳೆ ಹಡಗಲಿ, ಬಸರಕೋಡ, ಹೊಳೆ ಮಣ್ಣೂರ, ಗಾಡಗೋಳಿ ಗ್ರಾಮಗಳ ಜನರನ್ನು  ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲು ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಉಪ ವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ, ತಹಶೀಲ್ದಾರ್ ಕೆ. ಬಿ.ಕೋರಿಶೆಟ್ಟರ ನೆರೆಪೀಡಿತ ಸ್ಥಳಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹುಬ್ಬಳ್ಳಿ -ವಿಜಯಪುರ ರಾಷ್ಟ್ರೀಯ ಹೆದ್ದಾರಿಯು ಕೊಣ್ಣೂರು ಸೇತುವೆ ಬಳಿ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ರದ್ದುಗೊಳಿಸುವ ಸಾಧ್ಯತೆ ಇದೆ. ಜಿಲ್ಲೆಯ ಬಹುತೇಕ ಕಡೆ ಎರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ.

Post Comments (+)