ಬುಧವಾರ, ಜುಲೈ 28, 2021
26 °C

ಬಿಆರ್‌ಟಿ: ಗಂಡಾನೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ವಲಯದ ವ್ಯಾಪ್ತಿಯಲ್ಲಿ ಮಂಗಳವಾರ ಗಂಡಾನೆಯ ಕಳೇಬರ ಪತ್ತೆಯಾಗಿದೆ. 

ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ 100 ಮೀಟರ್‌ ದೂರದಲ್ಲಿರುವ ಹಳ್ಳವೊಂದರಲ್ಲಿ ಮೃತದೇಹ ಪತ್ತೆಯಾಗಿದೆ. ಆನೆಗೆ 8ರಿಂದ 10 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಆನೆಯ ದೇಹದಲ್ಲಿ ಎಲ್ಲೂ ಗಾಯಗಳು ಕಂಡು ಬಂದಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. 

‘ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕಳಲೆಯನ್ನು (ಎಳೆ ಬಿದಿರು) ಮಿತಿಗಿಂತ ಹೆಚ್ಚು ಸೇವಿಸಿದ್ದರಿಂದ ದೇಹದಲ್ಲಿ  ಸಯನೋಜೆನಿಕ್‌ ಗ್ಲೈಕೋಸೈಡ್‌ ಸಂಗ್ರಹವಾಗಿ, ಆನೆ ಮೃತಪಟ್ಟಿದೆ ಎಂದು ವರದಿ ತಿಳಿಸಿದೆ. ಕರುಳಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಬಿಆರ್‌ಟಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಸಂತೋಷ್‌ಕುಮಾರ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು