ಗದಗ: ‘ಪಶ್ಚಿಮ ಬಂಗಾಳದ ಜನರು ಬಿಜೆಪಿಯ 206 ಶಾಸಕರನ್ನು ಆರಿಸಿ, ಸಂಪೂರ್ಣವಾಗಿ ಆಶೀರ್ವದಿಸಿದ್ದಾರೆ. ಆದರೆ, ಇದನ್ನು ಒಪ್ಪಿಕೊಂಡು ಸಿಎಂ ಹುದ್ದೆಗೆ ರಾಜೀನಾಮೆ ನೀಡದೇ ಮಮತಾ ಬ್ಯಾನರ್ಜಿ ಅವರು ಮೊಂಡುತನ ತೋರುತ್ತಿರುವುದು ಮೂರ್ಖತನದ ಪರಮಾವಧಿ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

‘15 ವರ್ಷಗಳಿಂದ ಆಡಳಿತ ನಡೆಸಿದ ಮಮತಾ ಬ್ಯಾನರ್ಜಿ ಅವರ ಆಡಳಿತಕ್ಕೆ ಬೇಸತ್ತ ಜನರು ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ಇದಕ್ಕಾಗಿ ನಾನು ಪಶ್ಚಿಮ ಬಂಗಾಳದ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸುವೆ. ಟಿಎಂಸಿಯ ಗುಂಡಾಗಿರಿ, ಸತತವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಘರ್ಷ, ಕೇಂದ್ರ ಸರ್ಕಾರದ ಯೋಜನೆಗಳನ್ನು ಜಾರಿಗೆ ತರದೇ ಜನರಿಗೆ ಮೋಸ ಮಾಡಿದ್ದನ್ನು ಅರಿತ ಅಲ್ಲಿಯ ಜನ ಟಿಎಂಸಿಗೆ ತಕ್ಕ ಪಾಠ ಕಲಿಸಿದ್ದಾರೆ’ ಎಂದು ಹೇಳಿದರು.

‘100 ಕ್ಷೇತ್ರಗಳಲ್ಲಿ ಮತಚೋರಿ ಆಗಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದು, ಇದನ್ನು ಬೆಂಬಲಿಸಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರದ್ದು ಕೂಡ ದಿವಾಳಿತನದ ಪರಮಾವಧಿ. ಒಂದು ರಾಜ್ಯದ ಜನ ಸರ್ಕಾರ ಬದಲಿಸಿದಾಗ ಅದರಂತೆ ನಡೆದುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ. ಅದನ್ನು ಬಿಟ್ಟು ಬೇಜವಾಬ್ದಾರಿಯಿಂದ ಹೇಳಿಕೆ ನೀಡುವ ಮಮತಾ ಬ್ಯಾನರ್ಜಿ ಹಾಗೂ ರಾಹುಲ್ ಗಾಂಧಿಯವರ ನಡೆ ಖಂಡನೀಯ’ ಎಂದರು.

ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರುಡಗಿ, ಜಿಲ್ಲಾ ವಕ್ತಾರ ಎಂ.ಎಂ.ಹಿರೇಮಠ, ಸಂಗಮೇಶ ದುಂದೂರ, ಹಿರಿಯರಾದ ತೊಟೊಸೊ ಭಾಂಡಗೆ, ಶಹರ ಅಧ್ಯಕ್ಷ ಸುರೇಶ ಮರಳಪ್ಪನವರ, ಕೆ.ಪಿ.ಕೋಟಿಗೌಡ್ರ, ರಮೇಶ ಸಜ್ಜಗಾರ, ಮಂಜುನಾಥ ಶಾಂತಗೇರಿ, ರವಿ ಮಾನ್ವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-23-75459299

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.