ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ಕೋವಿಡ್‌ ಭೀತಿಯಿಂದಾಗಿ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

Last Updated 5 ಸೆಪ್ಟೆಂಬರ್ 2020, 8:23 IST
ಅಕ್ಷರ ಗಾತ್ರ

ಗದಗ: ಗಂಟಲು ದ್ರವ ಮಾದರಿ ಪರೀಕ್ಷೆಯ ವರದಿ ಬರುವ ಮುನ್ನವೇ ಉದ್ವೇಗಕ್ಕೆ ಒಳಗಾದ ವ್ಯಕ್ತಿಯೊಬ್ಬರು ಇಲ್ಲಿನ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಜಿಮ್ಸ್‌) ಕಟ್ಟಡದಿಂದ ಜಿಗಿ‌ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನ ಡೋಣಿ ಗ್ರಾಮದ ಬಸವರಾಜ್ ಈಳಗೇರ್ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ‌.

‘ಅವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಗುರುವಾರ ಕೋವಿಡ್‌–19 ಪರೀಕ್ಷೆ ಮಾಡಿಸಿದ್ದರು. ವರದಿ ಬರುವ ಮುನ್ನವೇ ತೀವ್ರ ಉದ್ವೇಗಕ್ಕೆ ಒಳಗಾಗಿ ಆತ್ಮಹತ್ಯೆಗೆ ಶರಣಾದರು.

ಪರೀಕ್ಷೆಯ ವರದಿ ಬಂದಿದ್ದು, ಅವರಿಗೆ ಕೋವಿಡ್‌ ತಗುಲಿರುವುದು ಖಚಿತವಾಗಿದೆ’ ಎಂದು ಜಿಮ್ಸ್‌ ನಿರ್ದೇಶಕ ಡಾ. ಬೂಸರೆಡ್ಡಿ ತಿಳಿಸಿದರು. ಗದಗ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT