ಗದಗ: ಪತ್ನಿಯನ್ನು ಸಂಶಯಿಸಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

2019ರ ಮೇ 09ರಂದು ಹೆಂಡತಿಯ ತಲೆಗೆ ಕೊಡಲಿಯಿಂದ ಹೊಡೆದು ಹತ್ಯೆ ಮಾಡಿದ್ದ ಗೋನಾಳ ಗ್ರಾಮದ ಆರೋಪಿ ರಮೇಶ ದುಂಡಪ್ಪ ತೇಲಿ, ಬಳಿಕ ತನ್ನ ಆರು ತಿಂಗಳ ಮಗನ ಕುತ್ತಿಗೆಯ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿ ಶಿರಹಟ್ಟಿ ಸಿಪಿಐ ಬಾಲಚಾಂದ್ರ ಡಿ. ಅವರು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸಾಕ್ಷಿ ವಿಚಾರಣೆ ನಡೆಸಿದ ಗದಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಎಸ್.ಮಹಾಲಕ್ಷ್ಮೀ ನೇರಳೆ ಅವರು ಆರೋಪ ರುಜುವಾಗಿದ್ದರಿಂದ ರಮೇಶ ತೇಲಿಗೆ ಜೀವಾವಧಿ ಶಿಕ್ಷೆ ಹಾಗೂ ₹10 ಸಾವಿರ ತಂಡ ವಿಧಿಸಿತೀರ್ಪು ಪ್ರಕಟಿಸಿದ್ದಾರೆ. ದಂಡ ತುಂಬಲು ತಪ್ಪಿದಲ್ಲಿ ಮತ್ತೆ ಆರು ತಿಂಗಳು ಸಾದಾ ಶಿಕ್ಷೆ ವಿಧಿಸಿದ್ದರೆ.ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸವಿತಾ ಎಂ.ಶಿಗ್ಲಿ ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.