ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಮನವಿ

Published : 24 ಸೆಪ್ಟೆಂಬರ್ 2024, 15:48 IST
Last Updated : 24 ಸೆಪ್ಟೆಂಬರ್ 2024, 15:48 IST
ಫಾಲೋ ಮಾಡಿ
Comments

ಶಿರಹಟ್ಟಿ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೈಗೊಳ್ಳುತ್ತಿರುವ ಅನಿರ್ಧಾವಷ್ಟಾವಧಿ ಮುಷ್ಕರಕ್ಕೆ ತಾಲ್ಲೂಕು ಘಟಕದಿಂದ ಕರೆ ನೀಡುತ್ತಿರುವ ಬಗ್ಗೆ ಮಂಗಳವಾರ ತಹಶೀಲ್ದಾರ ಅನಿಲ ಬಡಿಗೇರ ಅವರ ಮೂಲಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ತಾಲ್ಲೂಕು ಅಧ್ಯಕ್ಷ ನಾಗರಾಜ ಚೊಳಮ್ಮನವರ, ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು 17ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಲ್ಯಾಪ್ ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್, ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಾವು ನೋವುಗಳು ಸಂಭವಿಸುತ್ತಿದ್ದು, ನಿರಂತರವಾಗಿ ಮಾರಣಾಂತಿಕ ಹಲ್ಲೆ ನಡೆಯುತ್ತಿದೆ.

ಎಲ್ಲ ಮೊಬೈಲ್ ಆಪ್‌ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ತೀವ್ರ ಒತ್ತಡ ಹೇರುತ್ತಿರುವುದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ವ್ಯತಿರಿಕ್ತ ಪರಿಣಾಮಗಳು ಹೆಚ್ಚಾಗುತ್ತಿವೆ. ಇದರೊಂದಿಗೆ ಮೂಲ ಸೌಲಭ್ಯಗಳು ಹಾಗೂ ಸೇವಾ ವಿಷಯಗಳಿಗೆ ಸಂಬಂಧಿಸಿದ ಸೌಲಭ್ಯಗಳನ್ನು ಸರ್ಕರ ಕೂಡಲೇ ಒದಗಿಸಬೇಕು ಎಂದು ಒತ್ತಾಯಿಸಿದರು.

ಈ ಕುರಿತು ರಾಜ್ಯ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಬೇಡಿಕೆಗಳ ಬಗ್ಗೆ ಮನವಿ ಮಾಡಿದ್ದು, ಸೆ.26ರಿಂದ ಎಲ್ಲ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಸಮೂಹದ ಬೇಡಿಕೆ ಈಡೇರಿಸಿ ಉತ್ತಮ ಮತ್ತು ಗುಣಮಟ್ಟದ ರೀತಿಯಲ್ಲಿ ಸಾರ್ವಜನಿಕ ಮತ್ತು ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದು ಸಂಘವು ಈ ಮೂಲಕ ಆಗ್ರಹಿಸಿದೆ ಎಂದರು.

ಸಂಘದ ಕಾರ್ಯದರ್ಶಿ ಪರಶುರಾಮ ತಳವಾರ, ಶರಣು ಮೈನಾಳ, ಪ್ರವೀಣ ಬರಡಿ, ಲಕ್ಷ್ಮಣ ಲಮಾಣಿ, ಚೆನ್ನವೀರಸ್ವಾಮಿ ಸಿದ್ದಾಂತಿಮಠ, ಬಿ.ಸಿ.ನಂದಗಾವಿ, ಸಿ.ಸಿ.ನಾಗನೂರ, ಶಂಭುಲಿಂಗಯ್ಯ ಹೆಬ್ಬಾಳಮಠ, ನಾಗಪ್ಪ ರಾಠೋಡ, ಪಿ.ಟಿ.ಬಾರಕೇರ, ಪಿ.ಬಿ.ಗೋರೆಖಾನ್, ಎಸ್.ಎಚ್.ಮುಲ್ಲಾ, ರಾಧಾ ದೇಸಾಯಿಪಟ್ಟಿ, ಶೃತಿ ಮಡ್ಡಿ, ಎಸ್.ಎಚ್.ಮುಲ್ಲಾ, ಬಿ.ಎಫ.ಜಿನಗಿ, ಸಿ.ಪಿ.ತಳಗೇರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT