ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಅಧ್ಯಕ್ಷರಾಗಿ ಅಶೋಕ ಮಂದಾಲಿ

ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿ ಪದಾಧಿಕಾರಿಗಳ ನೇಮಕ
Published 14 ಮಾರ್ಚ್ 2024, 14:46 IST
Last Updated 14 ಮಾರ್ಚ್ 2024, 14:46 IST
ಅಕ್ಷರ ಗಾತ್ರ

ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಶಿಫಾರಸಿನ ಮೇರೆಗೆ ಗದಗ ತಾಲ್ಲೂಕು ಮಟ್ಟದ ಗ್ಯಾರಂಟಿ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಆದೇಶ ಹೊರಡಿಸಿದ್ದಾರೆ.

ತಾಲ್ಲೂಕು ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷರಾಗಿ ಅಶೋಕ ಮಂದಾಲಿ ಅವರನ್ನು ನೇಮಕಗೊಳಿಸಲಾಗಿದೆ.

ಶಂಭು ಎಸ್. ಕಾಳೆ, ಮೀನಾಕ್ಷಿ ಬೆನಕಣ್ಣವರ, ಸಾವಿತ್ರಿ ಹೂಗಾರ, ದಯಾನಂದ ಪವಾರ, ಸಂಗು ಕೆರಕಲಮಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯಕರ, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶಸಿಂಗ್ ಮಿಟಾಡೆ, ಮಲ್ಲಪ್ಪ ಬಾರ್ಕೇರ, ಭಾಷಾ ಮಲ್ಲಸಮುದ್ರ, ಕೃಷ್ಣಗೌಡ ಎಚ್. ಪಾಟೀಲ ಸದಸ್ಯರಾಗಿದ್ದು, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಲಾಗಿದೆ.

ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಸರ್ಕಾರ ಆದೇಶದಲ್ಲಿ ತಿಳಿಸಿರುವಂತೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನ ಹಾಗೂ ಮೇಲ್ವಿಚಾರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT