ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಮೂಹಿಕ ವಿವಾಹ ನೆಮ್ಮದಿ ಜೀವನಕ್ಕೆ ನಾಂದಿ’

Published 10 ಮೇ 2024, 15:33 IST
Last Updated 10 ಮೇ 2024, 15:33 IST
ಅಕ್ಷರ ಗಾತ್ರ

ಶಿರಹಟ್ಟಿ: ಸಾಮೂಹಿಕ ವಿವಾಹಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕುದುವುದಲ್ಲದೆ, ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತವೆ ಎಂದು ಮಾಜಿ ಶಾಸಕ ಜಿ.ಎಸ್. ಗಡ್ಡದ್ದೇವರಮಠ ಹೇಳಿದರು.

ಬಸವೇಶ್ವರ ಜಯಂತಿ ಅಂಗವಾಗಿ ಸ್ಥಳೀಯ ಬಿರೇಶ್ವರ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು.

ವಧು–ವರರು ದಾಂಪತ್ಯ ಜೀವನವನ್ನು ಮಾದರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದರು.

ಇಂದಿನ ದಿನಮಾನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಕಬ್ಬಿಣದ ಕಡಲೆ ಇದ್ದಂತೆ. ಉಳ್ಳವರು ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಿ ಬಡವ, ಶ್ರೀಮಂತ, ಮೇಲು, ಕೀಳೇನ್ನದೆ ಎಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ನಡೆಸುವ ಎಲ್ಲ ಸತ್ಕಾರ್ಯ ಮಾಡಬೇಕು. ಇಂತಹ ಸಾಮಾಜಿಕ ಕಳಕಳಿಯೊಂದಿಗೆ ಸಮಿತಿಯವರು ನಡೆಸುವ ಸಾಮೂಹಿಕ ವಿವಾಹ ಮಹೋತ್ಸವಗಳು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿದರು. ಎಚ್.ಡಿ.ಮಾಗಡಿ, ಮಂಜುನಾಥ ಘಂಟಿ, ದೇವಪ್ಪ ಬಟ್ಟೂರ, ಗೂಳಪ್ಪ ಕರಿಗಾರ, ರಾಮಣ್ಣ ಕಟ್ಟೆಕಾರ, ಪರಶುರಾಮ ಡೊಂಕಬಳ್ಳಿ, ಮಂಜಪ್ಪ ಹಮ್ಮಿಗಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT