ಶುಕ್ರವಾರ, ಅಕ್ಟೋಬರ್ 30, 2020
24 °C

ಮೆಗಾ ಇ–ಲೋಕ್‌ ಅದಾಲತ್‌: 626 ಪ್ರಕರಣಗಳು ಇತ್ಯರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸಂಧಾನಕ್ಕೆ ಅರ್ಹವಾದ 1,462 ಪ್ರಕರಣಗಳನ್ನು ಮೆಗಾ ಇ-ಲೋಕ್‌ ಅದಾಲತ್‌ಗೆ ಆಯ್ಕೆ ಮಾಡಿಕೊಳ್ಳಲಾಗಿತ್ತು.

ಕೋವಿಡ್‍-19ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಎಸ್.ಒ.ಪಿ ಮಾರ್ಗದರ್ಶನದ ಅನ್ವಯ ವಿಡಿಯೊ ಕಾನ್ಫರೆನ್ಸ್‌ ಮೂಲಕ ಕಕ್ಷಿದಾರರು ತಮ್ಮ ವಕೀಲರ ಮೂಲಕ ಪರಸ್ಪರ ಒಪ್ಪಿಗೆ ಮೇರೆಗೆ ರಾಜಿ ಸಂಧಾನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಒಟ್ಟು 626 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು.

ರಾಜಿಯಾದ ಪ್ರಕರಣಗಳಲ್ಲಿ ಈಗಾಗಲೇ ನ್ಯಾಯಾಲಯಕ್ಕೆ ತುಂಬಿದ್ದ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ  ಮರುಪಾವತಿ ಮಾಡಲಾಗುವುದು. ಇ– ಲೋಕ್‌ ಅದಾಲತ್‌ನಲ್ಲಿ ಪಾಲ್ಗೊಂಡ ಎಲ್ಲರಿಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ವೆಂಕನಗೌಡ ಪಾಟೀಲ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು