ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ಸಿರಿಧಾನ್ಯ ಮೇಳ, ಕೃಷಿ ತಂತ್ರಜ್ಞಾನ ಪ್ರದರ್ಶನ

Published 28 ಜನವರಿ 2024, 16:04 IST
Last Updated 28 ಜನವರಿ 2024, 16:04 IST
ಅಕ್ಷರ ಗಾತ್ರ

ಗದಗ: ಹುಲಕೋಟಿಯ ಕೈಲಾಸ ಆಶ್ರಮದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಸಿರಿಧಾನ್ಯ ಮೇಳ ಹಾಗೂ ಕೃಷಿ ತಂತ್ರಜ್ಞಾನ ಪ್ರದರ್ಶನ ಮೇಳ ಸಾರ್ವಜನಿಕರ ಗಮನ ಸೆಳೆಯಿತು.

ಸಿರಿಧಾನ್ಯ ಪ್ರತಿಯೊಬ್ಬರ ಆರೋಗ್ಯ ರಕ್ಷಣೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂಬ ಸಂದೇಶ ಸಾರಿದ ಚಿತ್ತಾಕರ್ಷಕ ರಂಗೋಲಿಯು ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಯಿತು. 

ಅಂತರರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಪ್ರಾಮುಖ್ಯತೆಯನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ಸಿರಿಧಾನ್ಯ ಉತ್ಸವ ಆಯೋಜಿಸಲಾಗಿತ್ತು.

ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳು ಉತ್ಪಾದಿಸಿದ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ಕೂಡ ನಡೆಯಿತು. ಆಧುನಿಕ ಕೃಷಿಯಲ್ಲಿ ತಂತ್ರಜ್ಞಾನ ಬಳಕೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಕೃಷಿ ಯಂತ್ರಗಳ ಪ್ರದರ್ಶನ ನಡೆಯಿತು. 

ಕೃಷಿ, ತೋಟಗಾರಿಕೆ ತಂತ್ರಜ್ಞಾನ, ನೈಸರ್ಗಿಕ ಕೃಷಿ, ಪಶು ಸಂಗೋಪನೆ, ಸಿರಿಧಾನ್ಯಗಳ ಮೌಲ್ಯವರ್ಧನೆ, ಕೃಷಿ ಆಧುನಿಕ ಉಪಕರಣಗಳ ಬಗ್ಗೆ ಪ್ರದರ್ಶನದಲ್ಲಿ ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಸಿರಿಧಾನ್ಯ ಮೇಳ, ಕೃಷಿ ತಂತ್ರಜ್ಞಾನ ಪ್ರದರ್ಶನಕ್ಕೆ ಚಾಲನೆ ನೀಡಿದರು.

ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ, ಹರಿಹರಪುರ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದ ಸ್ವಯಂಪ್ರಕಾಶ ಸಚ್ಚಿದಾನಂದ ಸ್ವಾಮೀಜಿ, ಗದುಗಿನ ಶಿವಾನಂದ ಮಠದ ಅಭಿನವ ಶಿವಾನಂದ ಸ್ವಾಮೀಜಿ, ಶಿರಹಟ್ಟಿ ಫಕೀರೇಶ್ವರ ಮಹಾ ಸಂಸ್ಥಾನ ಮಠದ ಫಕೀರೇಶ್ವರ ಸ್ವಾಮೀಜಿ, ಗದಗ ವಿಜಯಪುರ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ, ಬೆಳಗಾವಿಯ ನಿಡಸೋಸಿ ದುರುದುಂಡೇಶ್ವರ ಸಿದ್ಧ ಸಂಸ್ಥಾನ ಮಠದ ನಿಜಲಿಂಗೇಶ್ವರ ಸ್ವಾಮೀಜಿ, ಬೆಂಗಳೂರಿನ ರಾಮೋಹಳ್ಳಿ ರಾಮಕೃಷ್ಣ ಯೋಗಾಶ್ರಮದ ಅಧ್ಯಕ್ಷ ಸ್ವಾಮಿ ಯೋಗೇಶ್ವರಾನಂದಜೀ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ ಇದ್ದರು.

ಹುಲಕೋಟಿಯಲ್ಲಿ ನಡೆದ ಸಿರಿಧಾನ್ಯ ಉತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಉದ್ಘಾಟಿಸಿದರು
ಹುಲಕೋಟಿಯಲ್ಲಿ ನಡೆದ ಸಿರಿಧಾನ್ಯ ಉತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಉದ್ಘಾಟಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT