ಸೋಮವಾರ, ಅಕ್ಟೋಬರ್ 26, 2020
27 °C

ಉಪಚುನಾವಣೆಯಲ್ಲಿ ಗೆಲುವು ನಮ್ಮದೇ; ಸಚಿವ ಜಗದೀಶ್‌ ಶೆಟ್ಟರ್‌ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆಲುವು ಸಾಧಿಸಲಿದೆ. ನಮ್ಮ ಪಕ್ಷದ ಅಭ್ಯರ್ಥಿಗಳು ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಚಿವ ಜಗದೀಶ್‌ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದರು.

ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್‌.ವಿ.ಸಂಕನೂರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಶನಿವಾರ ಗದಗಕ್ಕೆ ಭೇಟಿ ನೀಡಿದ ಸಂದರ್ಭ, ಅವರು ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದರು.

‘ಉಪ ಚುನಾವಣೆ ಜತೆಗೆ ಎರಡು ಶಿಕ್ಷಕರ ಕ್ಷೇತ್ರ ಮತ್ತು ಎರಡು ಪದವೀಧರ ಕ್ಷೇತ್ರದ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ವಿಧಾನ ಪರಿಷತ್‌ ಚುನಾವಣೆ ಸಂಬಂಧವಾಗಿ ಗದಗ, ಹಾವೇರಿ, ಕಾರವಾರ ಮತ್ತು ಧಾರವಾಡ ಜಿಲ್ಲೆಗಳ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಗದಗ ಜಿಲ್ಲೆಯಲ್ಲಿ ಶನಿವಾರ ನಡೆದ ನಾಲ್ಕೈದು ಸಭೆಯಲ್ಲಿ ಭಾಗವಹಿಸಿದ್ದೆ. ಕೊರೊನಾ ಇರುವುದರಿಂದ ಸಭೆಗಳಿಗೆ ಮತದಾರರು ಬರುತ್ತಾರೋ ಇಲ್ಲವೋ ಎಂಬ ಬಗ್ಗೆ ಅನುಮಾನ ಇತ್ತು. ಆದರೆ, ನಾನು ಭಾಗವಹಿಸಿದ ಎಲ್ಲ ಸಭೆಗಳಿಗೂ ನೂರರಿಂದ ಇನ್ನೂರು ಮತದಾರರು ಬಂದಿದ್ದಾರೆ. ಇದನ್ನು ನೋಡಿದಾಗ ಬಿಜೆಪಿ ಪರವಾದ ಅಲೆ ಇದೆ ಎಂಬುದು ತಿಳಿಯತ್ತದೆ’ ಎಂದು ಅವರು ಹೇಳಿದರು.

‘ಕಳೆದ ವರ್ಷದ ಪ್ರವಾಹ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಅತಿಹೆಚ್ಚು ಪರಿಹಾರ ನೀಡಿದೆ. ಈ ವರ್ಷವೂ ಪ್ರವಾಹ ಸಂತ್ರಸ್ತರಿಗೆ ನೆರವು ನೀಡುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸುತ್ತಿದ್ದಾರೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು