ಗದಗ: 2025-26ನೇ ಸಾಲಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಪಿಎಚ್.ಡಿ ವಿದ್ಯಾರ್ಥಿ ಗಳಿಗೆ ಫೆಲೋಶಿಫ್ಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್ ಸಮುದಾಯದ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಸೆಪ್ಟೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಬೇಕು. ಸಲ್ಲಿಸಿದ ಅರ್ಜಿಗಳನ್ನು ಖುದ್ದಾಗಿ ಅಭ್ಯರ್ಥಿಗಳೇ ಹಾಜರಾಗಿ, ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಕಚೇರಿಗೆ ಸಲ್ಲಿಸಬೇಕು.

2025-26ನೇ ಸಾಲಿನಲ್ಲಿ ಪಿಎಚ್.ಡಿ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಫೆಲೋಶಿಪ್ಗಾಗಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಪಿಎಚ್.ಡಿ/ಎಂ.ಫಿಲ್ ಯಾವುದಾದರೂ ಒಂದು ಕೋರ್ಸ್ಗೆ ಮಾತ್ರ ಅರ್ಜಿ ಸಲ್ಲಿಸಬೇಕು.

ಅಂಚೆ ತೆರಪು, ಅರೆಕಾಲಿಕ, ದೂರ ಶಿಕ್ಷಣದಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಅರ್ಹರಿರುವುದಿಲ್ಲ.

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ₹8 ಲಕ್ಷ ಮೀರಿರಬಾರದು. ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಭ್ಯರ್ಥಿಯ ವಯೋಮಿತಿ 35 ವರ್ಷ ಮೀರಿರಬಾರದು.

ಮಾಹಿತಿಗೆ: ಜಿಲ್ಲಾ ಮತ್ತು ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.