ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲಕ್ಷ್ಮೇಶ್ವರ: 50ಕ್ಕೂ ಅಧಿಕ ಬೈಕ್ ವಶ

Published : 6 ಸೆಪ್ಟೆಂಬರ್ 2024, 13:58 IST
Last Updated : 6 ಸೆಪ್ಟೆಂಬರ್ 2024, 13:58 IST
ಫಾಲೋ ಮಾಡಿ
Comments

ಲಕ್ಷ್ಮೇಶ್ವರ: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ 50ಕ್ಕೂ ಅಧಿಕ ಬೈಕ್‌ಗಳನ್ನು ಇಲ್ಲಿನ ಪೊಲೀಸರು ಶುಕ್ರವಾರ ವಶಕ್ಕೆ ಪಡೆದರು.

ಪಟ್ಟಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಂಬರ್ ಪ್ಲೇಟ್ ಇಲ್ಲದ, ಹೆಲ್ಮೆಟ್ ಧರಿಸದ ಹಾಗೂ ಇತರ ಸಂಚಾರ ನಿಯಮಗಳನ್ನು ಪಾಲಿಸದ ವಾಹನ ಸವಾರರ ಬೈಕ್‌ಗಳನ್ನು ವಶಪಡಿಸಿಕೊಂಡರು.

ಸಿಪಿಐ ನಾಗರಾಜ ಮಾಡಳ್ಳಿ ಮಾತನಾಡಿ, ‘ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಾಚರಣೆ ನಡೆಸಲಾಗಿದೆ. ಎಲ್ಲ ಬೈಕ್ ಸವಾರರು ಇಲಾಖೆ ಕಾನೂನುಗಳನ್ನು ತಪ್ಪದೇ ಪಾಲಿಸಬೇಕು. ಕಾರು ಚಾಲಕರು ಸೀಟ್‍ ಬೆಲ್ಟ್ ಧರಿಸಿ ಸಂಚಾರ ನಿಯಮಗಳಂತೆ ನಡೆದುಕೊಳ್ಳಬೇಕು’ ಎಂದು ಸೂಚನೆ ನೀಡಿದರು.

ಪಿಎಸ್ಐ ಈರಣ್ಣ ರಿತ್ತಿ ಮಾತನಾಡಿ ‘ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಹೆಚ್ಚಿನ ಕಠಿಣ ಕ್ರಮ ಕೈಗೊಳ್ಳಲಾಗುವುದು. ಚಾಲಕರು, ವಾಹನ ಸವಾರರು ಕಡ್ಡಾಯವಾಗಿ ನಿಯಮಗಳಲ್ಲಿ ಪಾಲಿಸಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT