ಗದಗ: ‘ತಾಯಿಗಿಂತ ಮೀಗಿಲು ಯಾರೂ ಇಲ್ಲ. ತಂದೆ– ತಾಯಿಯೇ ದೇವರು. ಮಾತು ಬಾರದ ಮಗುವಿಗೆ, ಮಾತು ಕಲಿಸುವವಳು ಅವ್ವ. ಪ್ರತಿಯೊಬ್ಬರೂ ಬದುಕಿನಲ್ಲಿ ತಂದೆ ತಾಯಿಯ ಋಣ ತೀರಿಸುವ ಕೆಲಸ ಮಾಡಬೇಕು’ ಎಂದು ಸಿದ್ಧರಾಮ ಸ್ವಾಮೀಜಿ ಹೇಳಿದರು.

ನಗರದ ತೋಂಟದಾರ್ಯ ಮಠದ ಆವರಣದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ಈಚೆಗೆ ನಡೆದ 2,779ನೇ ಶಿವಾನುಭವ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ ಎಂಬ ಮಾತು ಸತ್ಯ. ಕೆಟ್ಟ ಮಕ್ಕಳು ಹುಟ್ಟಬಹುದು. ಆದರೆ, ಕೆಟ್ಟ ತಾಯಿ ಇರಲಾರಳು. ಮಕ್ಕಳ ಲಾಲನೆ ಪಾಲನೆ ಮಾಡುವ ಮೂಲಕ ಮನೆಯ ಎಲ್ಲಾ ಜವಾಬ್ದಾರಿಗಳನ್ನು ಅವ್ವ ಹೊರುತ್ತಾಳೆ. ಮಕ್ಕಳಲ್ಲಿ ಭೇದ ಮಾಡದೇ ಸಮಾನವಾಗಿ ಬೆಳೆಸುವ ಅವ್ವ ಮಕ್ಕಳ ಪಾಲಿನ ದೇವರು. ಸಭಾಪತಿ ಬಸವರಾಜ ಹೊರಟ್ಟಿ ಅವ್ವನ ಋಣವನ್ನು ಅವ್ವ ಸೇವಾ ಟ್ರಸ್ಟ್ ಮೂಲಕ ತೀರಿಸುತ್ತಿರುವುದು ಸಮಾಜಕ್ಕೆ ಮಾದರಿ’ ಎಂದರು.

ಹುಬ್ಬಳ್ಳಿಯ ಎಸ್ಜೆಎಂ ಕಾಲೇಜಿನ ಸುಪ್ರಿಯಾ ಮಲಶೆಟ್ಟಿ ಮಾತನಾಡಿ, ‘ನಮ್ಮ ಬದುಕಿನ ನಕ್ಷೆಯೇ ಅವ್ವ. ಬಸವಣ್ಣನವರ ವಚನಗಳು ಅವ್ವನ ಸೆರಗು ಇದ್ದಂತೆ. ಗೋಡೆಗಳಿಂದ ಮನೆ ಕಟ್ಟಿದರೆ, ಅವ್ವ ಪ್ರೀತಿಯಿಂದ ಎಲ್ಲರ ಮನವನ್ನು ಕಟ್ಟುವಳು’ ಎಂದರು.

ಎಲ್ಎಲ್ಎಂ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಹನಾ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ನ ಕಾರ್ಯದರ್ಶಿ ಶಶಿ ಸಾಲಿ ಮಾತನಾಡಿ, ‘ಸಭಾಪತಿ ಹೊರಟ್ಟಿ ಅವರಿಗೆ ತಾಯಿಯ ಬಗ್ಗೆ ಅಪಾರವಾದ ಪ್ರೀತಿ ಇದ್ದುದರಿಂದ ಅವ್ವ ಸೇವಾ ಟ್ರಸ್ಟ್ ಸ್ಥಾಪಿಸಿ, ಅನೇಕ ಸಮಾಜಮುಖಿ ಕೆಲಸ ಮಾಡುತ್ತಾ ಬರುತ್ತಿದ್ದಾರೆ’ ಎಂದರು.

ಮಾಜಿ ಸಚಿವ ಎಸ್.ಎಸ್. ಪಾಟೀಲ, ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟರ, ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗರಾಜ ಅಂಗಡಿ, ಪತ್ರಕರ್ತ ಅನಂತ ಕಾರ್ಕಳ ಇದ್ದರು.

ಅವ್ವ ಸೇವಾ ಟ್ರಸ್ಟ್ ವತಿಯಿಂದ ಮಹಿಳಾ ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.

ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ್ ಸುತಾರ ವಚನಸಂಗೀತ ನಡೆಸಿಕೊಟ್ಟರು. ಅವನಿ ಎಂ. ಪುಣೇಕರ ಧಾರ್ಮಿಕ ಗ್ರಂಥ ಪಠಿಸಿದರು. ಶ್ರೇಯಾ ಡಿ. ವಿಠ್ಠಲ್ಕರ ವಚನ ಚಿಂತನ ನೆಡೆಸಿಕೊಟ್ಟರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಉಪಾಧ್ಯಕ್ಷ ಡಾ. ಉಮೇಶ ಪುರದ ಹಾಗೂ ವಿದ್ಯಾ ಪ್ರಭು ಗಂಜಿಹಾಳ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸಹಕಾರ್ಯದರ್ಶಿ ಸೋಮಶೇಖರ ಪುರಾಣಿಕ ಹಾಗೂ ನಾಗರಾಜ್ ಹಿರೇಮಠ, ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ, ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರು ಹಾಗೂ ಶಿವಾನುಭವ ಸಮಿತಿಯ ಸಹ ಚೇರ್ಮನ್ ಶಿವಾನಂದ ಹೊಂಬಳ ಹಾಗೂ ಮಠದ ಭಕ್ತರು ಇದ್ದರು.