ಮುಳಗುಂದ: ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಆದರ್ಶಗಳು ಮಹಿಳೆಯರಿಗೆ ಮಾದರಿಯಾಗಿವೆ. ಅವರ ತತ್ವಾದರ್ಶಗಳನ್ನು ಪಾಲಿಸಬೇಕು ಎಂದು ಧಾರವಾಡ ಮುರುಘಾಮಠ ಹಾಗೂ ಗವಮಿಮಠದ ಮಲ್ಲಿಕಾರ್ಜನ ಸ್ವಾಮೀಜಿ ಹೇಳಿದರು.

ಇಲ್ಲಿನ ಹೇಮರಡ್ಡಿ ಮಲ್ಲಮ್ಮ ಸೇವಾ ಸಂಘ ಹಾಗೂ ಗದಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ವತಿಯಿಂದ ಸೋಮವಾರ ನಡೆದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಜಯಂತ್ಯುತ್ಸವ ಹಾಗೂ ಮನೆಮನದಲ್ಲಿ ಶರಣ ಸಂಸ್ಕೃತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕದಳಿ ಮಹಿಳಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷೆ ಸುಧಾ ಹುಚ್ಚಣ್ಣವರ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಅವರ ವಿಚಾರಧಾರೆಗಳನ್ನು ಮಹಿಳೆಯರು ಅರ್ಥೈಸಿಕೊಂಡು ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಕೆ.ಎ.ಬಳಿಗಾರ ಉಪನ್ಯಾಸ ಮಾಡಿದರು. ಸುಧಾ ಹುಚ್ಚಣ್ಣವರ ಬರೆದ ‘ಸ್ತ್ರೀ ಸಂವೇದನಾ ಅಸ್ಮಿತೆ’ ಕೃತಿಯನ್ನು ಬಿಡುಗಡೆ ಮಾಡಲಾಯಿತು. ಸೇವಾ ಸಂಘದ ಅಧ್ಯಕ್ಷ ಎಂ.ಡಿ.ಬಟ್ಟೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಸುಂಕಾಪೂರ, ಮಲ್ಲಮ್ಮ ಬಟ್ಟೂರ, ರಾಜೇಶ್ವರಿ ಬಡ್ನಿ, ಮುಖಂಡರಾದ ಶಂಕ್ರಪ್ಪ ಗೊರವರ, ಕೆ.ಎಲ್.ಕರೇಗೌಡ್ರ, ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-23-405716574

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.