ಮುಂಡರಗಿ: ‘ತಾಲ್ಲೂಕಿನ ಹಮ್ಮಿಗಿ ಗ್ರಾಮದಿಂದ ಮುಂಡರಗಿ ಪಟ್ಟಣದ ಮಾರ್ಗವಾಗಿ ಗದುಗಿಗೆ ನಿಯಮಿತವಾಗಿ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಮುಂಡರಗಿಗೆ ಅನ್ಯಾಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪಟ್ಟಣಕ್ಕೆ ಪ್ರತ್ಯೇಕ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಡಾ.ಚಂದ್ರು ಲಮಾಣಿ ಭರವಸೆ ನೀಡಿದರು.

ಪಟ್ಟಣದ ಶಾಸಕರ ಮಾದರಿ ಶಾಲಾ ಕಟ್ಟಡ ಅಭಿವೃದ್ಧಿ ಕಾಮಗಾರಿ ಸೇರಿದಂತೆ ಪಟ್ಟಣದ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಪಟ್ಟಣದಲ್ಲಿ ಪೌರ ಕಾರ್ಮಿಕರಿಗಾಗಿ ವಿಶ್ರಾಂತಿ ಗೃಹ ನಿರ್ಮಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪೌರ ಕಾರ್ಮಿಕರಿಗೆ ನಿರ್ಮಾಣವಾಗುತ್ತಿರುವ ಪ್ರಥಮ ವಿಶ್ರಾಂತಿ ಗೃಹವಾಗಿದೆ. ಕಾರ್ಮಿಕರ ಪ್ರತಿಭಟನೆಯು ಸ್ಥಗಿತಗೊಂಡಿದ್ದು, ಅವರ ಬೇಡಿಕೆ ಈಡೇರಿಸುವ ಕುರಿತಂತೆ ಸರ್ಕಾರದೊಂದಿಗೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ ಮಾತನಾಡಿ, ‘ಪಟ್ಟಣದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಗುತ್ತಿಗೆದಾರರು ಸಕಾಲದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು’ ಎಂದರು.

ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಮಾತನಾಡಿ, ‘ಕರ ವಸೂಲಿಯಲ್ಲಿ ಮುಂಡರಗಿ ಪುರಸಭೆಯು ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಪಟ್ಟಣದಲ್ಲಿ ಒಂದು ಸುಂದರ ಉದ್ಯಾನವನದ ಅಗತ್ಯವಿದ್ದು, ಉದ್ಯಾನವನ ನಿರ್ಮಾಣಕ್ಕೆ ಶಾಸಕರು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿಕೊಂಡರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಫಿಕ್ ಮುಲ್ಲಾ, ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ, ಬಿಜೆಪಿ ಕಾರ್ಯದರ್ಶಿ ಪ್ರಶಾಂತ ಗುಡದಪ್ಪನವರ, ಮುಂಖಡರಾದ ಮೈಲಾರೆಪ್ಪ ಕಲಕೇರಿ, ರವಿಗೌಡ ಪಾಟೀಲ, ಪವಿತ್ರಾ ಕಲ್ಲಕುಟಿಗರ, ಪುಷ್ಪಾ ಉಕ್ಕಲಿ, ಪುರಸಭೆ ಸದಸ್ಯರಾದ ರಾಜಾಬಕ್ಷಿ ಬೆಟಗೇರಿ, ಪವನ ಮೇಟಿ, ಶಿವಪ್ಪ ಚಿಕ್ಕಣ್ಣವರ, ಪ್ರಹ್ಲಾದ ಹೊಸಮನಿ, ಜ್ಯೋತಿ ಹಾನಗಲ್ಲ, ಟಿ.ಬಿ.ದಂಡಿನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.