ಮುಂಡರಗಿ: ‘ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬ ಸೇರಿದಂತೆ ತಾಲ್ಲೂಕಿನಾದ್ಯಂತ ಜರುಗುವ ಎಲ್ಲ ಹಬ್ಬಗಳನ್ನು ಸಾರ್ವಜನಿಕರು ಶಾಂತಿ ಹಾಗೂ ಸೌಹಾರ್ದದಿಂದ ಆಚರಿಸಬೇಕು. ಆ ಮೂಲಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು’ ಎಂದು ನೂತನ ಸಿಪಿಐ ಅಯ್ಯನಗೌಡ ಪಾಟೀಲ ತಿಳಿಸಿದರು.

ಬಕ್ರಿದ್ ಹಬ್ಬದ ಪ್ರಯುಕ್ತ ಮಂಗಳವಾರ ತಾಲ್ಲೂಕಿನ ಡಂಬಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಜಗತ್ತಿನಲ್ಲಿ ಪ್ರತಿಯೊಂದು ಧರ್ಮವು ಶಾಂತಿ ಹಾಗೂ ನೆಮ್ಮದಿಯನ್ನು ಬಯಸುತ್ತವೆ. ಶಾಂತಿಯಿಂದ ಮಾತ್ರ ಸದೃಢ ಸಮಾಜ ನಿರ್ಮಾಣಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಶಾಂತಿ, ಸುವ್ಯವಸ್ಥೆಯನ್ನು ಪಾಲನೆ ಮಾಡುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಸಿದ್ಧಪ್ಪ ಮಠದ, ಅಂಜುಮನ್ ಕಮಿಟಿ ಅಧ್ಯಕ್ಷ ಬಶೀರಹಮ್ಮದ ತಾಂಬೋಟಿ, ಬಸಪ್ಪ ಕೋತಂಬ್ರಿ, ಶಶಿಕಾಂತ ಬಂಡಿಹಾಳ, ಪೋಲಿಸ್ ಸಿಬ್ಬಂದಿ ಎಸ್.ಎಸ್.ಕೆಂಚಗಾರ, ಬಾಬುಜಾನ ಕಮ್ಮಾರ, ಎನ್.ಬಿ.ಪೂಜಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-23-732442378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.