ಮುಂಡರಗಿ: ಮನೆಯ ಬಳಿ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಯೊಂದು ಈಚೆಗೆ ದಾಳಿ ನಡೆಸಿದ್ದು, ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.

ಬಾಲಕನನ್ನು ಪಟ್ಟಣದ ಎಸ್.ಎಸ್.ಪಾಟೀಲ ನಗರದ ಪರಶುರಾಮ ಕೊಳೆಕಾರ (10) ಎಂದು ಗುರುತಿಸಲಾಗಿದೆ. ನಾಯಿ ದಾಳಿ ಮಾಡಿದ ತಕ್ಷಣ ಬಾಲಕನು ಜೋರಾಗಿ ಚೀರಾಡಿದ್ದಾನೆ. ಅಕ್ಕಪಕ್ಕದವರು ಬಾಲಕನನ್ನು ನಾಯಿ ದಾಳಿಯಿಂದ ಪಾರು ಮಾಡಿದ್ದಾರೆ. ಪಾಲಕರು ತಕ್ಷಣ ಗಾಯಗೊಂಡ ಬಾಲಕನನ್ನು ಅಸ್ಪತ್ರೆಗೆ ದಾಖಲಿಸಿದ್ದಾರೆ.

ಎಸ್.ಎಸ್.ಪಾಟೀಲ ನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಪುರಸಭೆಯವರು ತಕ್ಷಣ ಬೀದಿ ನಾಯಿಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಕಾಲೊನಿ ನಿವಾಸಿಗಳು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-23-1084240984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.