ಮುಂಡರಗಿ: ತಾಲ್ಲೂಕಿನ ಡಂಬಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಬೇಕು ಎಂದು ಒತ್ತಾಯಿಸಿ ಗ್ರಾಮದ ವಿವಿಧ ಸಂಘ, ಸಂಸ್ಥೆಗಳ ಕಾರ್ಯಕರ್ತರು ಶುಕ್ರವಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಬೇಡಿಕೆ ಈಡೇರಿಸುವಂತೆ ಉಪ ತಹಶೀಲ್ದಾರ್ ಎಸ್.ಎಸ್. ಬಿಚ್ಚಾಲಿ ಹಾಗೂ ಜಿಲ್ಲಾ ವೈದ್ಯಾಧಿಕಾರಿ ಎಸ್.ಎಸ್.ನೀಲಗುಂದ ಅವರಿಗೆ ಮನವಿ ಸಲ್ಲಿಸಿದರು.

ಸರ್ವೋದಯ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ವಿವಿದೋದ್ದೇಶಗಳ ಸಂಸ್ಥೆಯ ಕಾರ್ಯದರ್ಶಿ ಗುಡದಪ್ಪ ತಳಗೇರಿ ಮಾತನಾಡಿ, ಡಂಬಳ ಗ್ರಾಮದ ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಡಂಬಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದು, ಅದನ್ನು ಸರ್ಕಾರ ತಕ್ಷಣ ಮೇಲ್ದರ್ಜೆಗೆ ಏರಿಸಬೇಕು. ಹದಿನೈದು ದಿನಗಳೊಳಗೆ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸದಿದ್ದರೆ ಡಂಬಳ ಗ್ರಾಮದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ಕೈಗೊಂಡು ಅಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ವರಿಸಿದರು.

ಅಹಿಂದ ಜನತಾ ಸಂಘದ ಅಧ್ಯಕ್ಷ ಪ್ರಕಾಶ ಮೇಗೂರ ಮಾತನಾಡಿ, ಈಗಿರುವ ಆಸ್ಪತ್ರೆಯು ಹಲವಾರು ಸೌಲಭ್ಯಗಳಿಂದ ವಂಚಿತಗೊಂಡಿದ್ದು, ಅಂಬುಲೆನ್ಸ್ ವಾಹನ ಸೇರಿದಂತೆ ಆಸ್ಪತ್ರೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

'ಸಮುದಾಯ ಆರೋಗ್ಯ ಕೇಂದ್ರ ಮಾಡುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಾದ ಅಗತ್ಯ ವೈದ್ಯರು, ಸಿಬ್ಬಂದಿ ಹಾಗೂ ಇತರೆ ಸೌಲಭ್ಯಗಳನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ವೈದ್ಯಾಧಿಕಾರಿ ಎಸ್.ಎಸ್.ನೀಲಗುಂದ ಭರವಸೆ ನೀಡಿದರು.

ಪತ್ರಕರ್ತ ಲಕ್ಷ್ಮಣ ದೊಡ್ಡಮನಿ ಮಾತನಾಡಿದರು. ತಾಲ್ಲೂಕು ವೈದ್ಯಾಧಿಕಾರಿ ಎಸ್.ಎಸ್.ಪಾಟೀಲ, ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ನಿತಿನ್ ಸ್ವರೂಪ, ವೈದ್ಯಾಧಿಕಾರಿ ಶಂಕರ ಭಾವಿಮನಿ ಹಾಜರಿದ್ದರು.

ಶಶಿಕಾಂತ ಬಂಡಿಹಾಳ, ಗೋಪಾಲ ಗದಗಿನ, ಮಂಜುನಾಥ ನರಗುಂದ, ಶ್ರೀಕಾಂತ ಸಿರಗೇರಿ, ಯಾಸಿನ ತಾಂಬೋಟಿ, ಭರಮಪ್ಪ ಮಂಗೋಜಿ, ರಾಜಾಭಕ್ಷಿ ಡಾಲಾಯತ, ಆದಿತ್ಯ ಗದಗಿನ, ಹರೀಶ ಯಲಬೋವಿ, ದಾವಲ ಬೆನಕೊಪ್ಪ, ಶಿವು ಹೊವಣ್ಣನವರ, ಅಶೋಕ ತಳಗೇರಿ, ಆಸೀಫ್ ತಾಂಬೋಟಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-23-613627539

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.