ಮುಂಡರಗಿ: ‘ಸಕಲ ಪೋಷಕಾಂಶಗಳನ್ನು ಒಳಗೊಂಡಿರುವ ಸಮತೋಲಿತ ಗೊಬ್ಬರ ಬಳಸುವುದರಿಂದ ಭೂಮಿಯ ಫಲವತ್ತತೆ ಹೆಚ್ಚಾಗಿ ಉತ್ತಮ ಇಳುವರಿ ದೊರೆಯುತ್ತದೆ. ಆದ್ದರಿಂದ ರೈತರು ಕೇವಲ ರಸಾಯನಿಕ ಗೊಬ್ಬರ ಬಳಸುವ ಬದಲು ಪರ್ಯಾಯ ಗೊಬ್ಬರ ಬಳಸಬೇಕು’ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ತಿಳಿಸಿದರು.

ತಾಲ್ಲೂಕಿನ ಬೆಣ್ಣಿಹಳ್ಳಿ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಧರ್ತಿ ಮಾತಾ ಬಚಾವೋ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈತರು ರಸಗೊಬ್ಬರಗಳನ್ನು ವಿವೇಚನೆಯಿಂದ ಬಳಕೆ ಮಾಡಬೇಕು. ಇದರಿಂದ ರಸಗೊಬ್ಬರದ ಉತ್ಪಾದನೆಯನ್ನು ಸುಧಾರಿಸಲು ಸಾಧ್ಯವಾಗುತ್ತದೆ. ಮಣ್ಣಿನ ಆರೋಗ್ಯದ ಸುಸ್ತಿರ ಸುಧಾರಣೆಯನ್ನು ಕಾಯ್ದುಕೊಳ್ಳಲು ಸಾವಯವ ಗೊಬ್ಬರ ನೆರವಾಗುತ್ತದೆ. ರೈತರ ಕೃಷಿ ವೆಚ್ಚಗಳು ಗಣನೀಯವಾಗಿ ಕಡಿಮೆಯಾಗುತ್ತವೆ ಎಂದು ತಿಳಿಸಿದರು.

ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಮತ್ತು ಅಗತ್ಯಕ್ಕೆ ತಕ್ಕಷ್ಟು ರಸಗೊಬ್ಬರ ಬಳಸಬೇಕು. ನಕಲಿ ರಸಗೊಬ್ಬರಗಳ ಉತ್ಪಾದನೆ ಮತ್ತು ಸಾಗಣಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಧರ್ತಿ ಬಚಾವೋ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ ಮಾತನಾಡಿ, ಬಿತ್ತನೆ ಪೂರ್ವದಲ್ಲಿ ರೈತರು ಬಿಜೋಪಚಾರ ಮಾಡಬೇಕು. ಬಿಜೋಪಚಾರ ಮಾಡುವುದರಿಂದ ಬೇರು ಕೊಳೆ ರೋಗ ಹಾಗೂ ಮತ್ತಿತರ ಆರಂಭಿಕ ರೋಗಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಅತಿಯಾದ ರಸಾಯನಿಕ ಗೊಬ್ಬರಗಳ ನೆರವಿನಿಂದ ಬೆಳೆದ ಬೆಳೆಗಳು ನಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ ಎಂದು ಅಭಿಪ್ರಾಯಪಟ್ಟರು.

ತಾಲ್ಲೂಕು ತಾಂತ್ರಿಕ ಕೃಷಿ ಅಧಿಕಾರಿ ಶಿವಮೂರ್ತಿ ನಾಯ್ಕ, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ ಗೌರಿಶಂಕರ ಸಜ್ಜನರ, ರೈತರಾದ ಗುರುರಾಜ ಡಂಬಳ, ಮಲ್ಲಪ್ಪ ಹೊಸಕುರುಬರ, ಈರಪ್ಪ ಚವಡಿ, ದೇವೇಂದ್ರಪ್ಪ ಶಿಗಟರಾಯನಕೇರಿ, ಮಾಂತೇಶ ಹಳ್ಳಿಕೇರಿ, ದೇವಪ್ಪ ಅಜ್ಜಪ್ಪನವರ, ಭೀಮಣ್ಣ ತಳವಾರ, ಕರಿಯಪ್ಪ ಡೊಳ್ಳಿನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-23-729933992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.