ಮುಂಡರಗಿ: ‘ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆ ನೀರಾವರಿ ಕಾಲುವೆಗಳನ್ನು ದುರಸ್ತಿಗೆ ಒತ್ತಾಯಿಸಿದ ತಾಲ್ಲೂಕಿನ ಡಂಬಳ ಗ್ರಾಮ ಸೇರಿದಂತೆ ಇತರ ಗ್ರಾಮಗಳ ರೈತರು ಶನಿವಾರ ಕಂದಾಯ ಇಲಾಖೆಯ ಅಧಿಕಾರಿ ಎಂ.ಎಂ. ವಿಭೂತಿ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮದ ದಕ್ಷಿಣ ಹಾಗೂ ಪೂರ್ವ ಭಾಗಗಳ ನೀರಾವರಿ ಕಾಲುವೆಗಳು ಸಂಪೂರ್ಣವಾಗಿ ಗಿಡ, ಗಂಟೆ ಹಾಗೂ ಹೂಳುಗಳಿಂದ ತುಂಬಿದ್ದು, ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಇಲಾಖೆಗಳು ಕಾಲುವೆಗಳನ್ನು ತಕ್ಷಣ ದುರಸ್ಥಿಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ತಾಲ್ಲೂಕಿನ ಡಂಬಳ, ತಾಂಬ್ರಗುಂಡಿ, ಬಸಾಪುರ ಮೊದಲಾದ ಗ್ರಾಮಗಳ ಕೆರೆಗಳಲ್ಲಿ ಸಾಕಷ್ಟು ನೀರಿದೆ. ಆದರೆ ಕಾಲುವೆಗಳು ಸಂಪೂರ್ಣವಾಗಿ ಹೂಳು ತುಂಬಿರುವುದರಿಂದ ಕೆರೆಯ ನೀರು ರೈತರಿಗೆ ಇದ್ದೂ ಇಲ್ಲದಂತಾಗಿದೆ. ಸಧ್ಯದಲ್ಲಿಯೇ ಮುಂಗಾರು ಹಂಗಾಮು ಆರಂಭವಾಗಲಿದ್ದು, ಕೆರೆಗಳು ನೀರಿನಿಂದ ಭರ್ತಿಯಾಗಲಿವೆ. ಅಧಿಕಾರಿಗಳ ಬೇಜವಾಬ್ದಾರಿಯಿಂದ ರೈತರು ಸಂಕಷ್ಟ ಎದುರಿಸುವಂತಾಗಿದೆ’ ಎಂದು ಆರೋಪಿಸಿದರು.

ಈ ಕುರಿತು ಕಂದಾಯ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬುಡ್ನೆಸಾಬ ಅತ್ತಾರ, ರಾಮಪ್ಪ ಯಂಡಿಗೇರಿ, ಮಲ್ಲಪ್ಪ ಗಡಗಿ, ಶಿವಪ್ಪ ಬಂಡಿ, ರಾಜಪ್ಪ ಪಟ್ಟಣಶೆಟ್ಟಿ, ರಾಜಶೇಖರ ಪಟ್ಟಣಶೆಟ್ಟಿ, ಎಸ್.ಆರ್. ಪಲ್ಲೇದ, ಹುಸೇನಸಾಬ ಕಾಸ್ತಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-23-671290372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.