ಮುಂಡರಗಿ: ರೈತರ ಅಗತ್ಯಕ್ಕೆ ತಕ್ಕಂತೆ ಯುರಿಯಾ ಗೊಬ್ಬರ ಪೂರೈಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕಿಸಾನ್ ಜಾಗೃತಿ ವಿಕಾಸ ಸಂಘದ ಕಾರ್ಯಕರ್ತರು ಸೋಮವಾರ ತಹಶೀಲ್ದಾರ್ ಅವರಿಗೆ ರಾಜ್ಯ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ವೀರಣ್ಣ ಗಟ್ಟಿ ಮಾತನಾಡಿ, ‘ಪ್ರತಿಯೊಬ್ಬ ರೈತರಿಗೂ ಅವರ ಎಫ್.ಐ.ಡಿ. ಆಧಾರದ ಮೇಲೆ ರಸಗೊಬ್ಬರ ಪಡೆದುಕೊಳ್ಳಬೇಕು ಎಂದು ಸರ್ಕಾರ ಆದೇಶ ಹೊರಡಿಸಿದ್ದು, ಇದರಿಂದ ರೈತರಿಗೆ ತೀವ್ರ ತೊಂದರೆಯಾಗುತ್ತದೆ. ಜೊತೆಗೆ ಸರ್ಕಾರವು ರಸಗೊಬ್ಬರ ಖರೀದಿಗೆ ಎಫ್.ಐ.ಡಿ. ಕಡ್ಡಾಯಗೊಳಿಸಿರುವುದರಿಂದ ರೈತರು ಪರದಾಡುವಂತಾಗಿದೆ’ ಎಂದು ಆರೋಪಿಸಿದರು.

‘ರೈತರು ತಮ್ಮ 1 ಎಕರೆ ಜಮೀನಿಗೆ ಕೇವಲ ಒಂದು ಚೀಲ ಯೂರಿಯಾ ಗೊಬ್ಬರ ಪಡೆದುಕೊಳ್ಳಬೇಕು ಎಂಬ ಆದೇಶವನ್ನು ಸರ್ಕಾರ ಹಿಂಪಡೆಯಬೇಕು. ಯೂರಿಯಾ ಖರೀದಿಸಲು ಎಫ್.ಐ.ಡಿ. ಕಡ್ಡಾಯಗೊಳಿಸಿರುವುದನ್ನು ರದ್ದುಗೊಳಿಸಿ ರೈತರ ಬೇಡಿಕೆಗೆ ಅನುಗುಣವಾಗಿ ಯೂರಿಯಾ ಗೊಬ್ಬರ ಪೂರೈಸಬೇಕು’ ಎಂದು ಒತ್ತಾಯಿಸಿದರು.

‘ರಸಗೊಬ್ಬರ ಖರೀದಿಯ ಜೊತೆಗೆ ಇತರೆ ಗೊಬ್ಬರ ಅಥವಾ ಪೋಷಕಾಂಶಗಳನ್ನು ಖರೀದಿಸಬೇಕೆಂದು ಒತ್ತಾಯಿಸುವ ರಸಗೊಬ್ಬರ ವಿತರಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟವಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು’ ಎಂದು ಆಗ್ರಹಿಸಿದರು.

ತಹಶೀಲ್ದಾರ್ ಎರ್ರಿಸ್ವಾಮಿ.ಪಿ.ಎಸ್. ಮನವಿ ಸ್ವೀಕರಿಸಿದರು. ಕಿಸಾನ್ ಜಾಗೃತಿ ವಿಕಾಸ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಿಂಗಪ್ಪ ಭಂಡಾರಿ, ಖಾಸೀಂಸಾಬ್ ಸೈಯದ್, ಫಕ್ಕಿರಪ್ಪ ವಡ್ಡಟ್ಟಿ, ರಾಮಸ್ವಾಮಿ ಬಿಚ್ಚಾಲಿ, ಸತ್ಯಪ್ಪ ಕವಲೂರ, ಅಂಬವ್ವ ಕಟ್ಟಿಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-23-1663376738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.