ಮುಂಡರಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ಡಂಬಳ, ಬಾಗೇವಾಡಿ, ಕಲಕೇರಿ ಮೊದಲಾದ ಗ್ರಾಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕ ಹಾಗೂ ಬಾಲಕಿಯರ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿವಿಧ ವಸತಿ ನಿಲಯಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಸಾಲಿನಲ್ಲಿ ಆರರಿಂದ ಹತ್ತನೇ ತರಗತಿಯಲ್ಲಿ ಅಧ್ಯಯನ ನಡೆಸುತ್ತಿರುವ ಬಾಲಕ ಬಾಲಕಿಯರು ಮೆಟ್ರಿಕ್ ಪೂರ್ವ ವಸತಿ ನಿಲಯಕ್ಕೆ ಹಾಗೂ ನಂತರದ ಹಂತಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತ ವಿದ್ಯಾರ್ಥಿಗಳು ಎಲ್ಲ ಅಗತ್ಯ ದಾಖಲೆಗಳು ಹಾಗೂ ಶಾಲಾ ಕಾಲೇಜುಗಳ ಮುಖ್ಯಸ್ಥರ ದೃಢೀಕರಣದೊಂದಿಗೆ (http://SWD.Karnataka.gov.in) ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.

ಮೆಟ್ರಿಕ್ ಪೂರ್ವ ವಸತಿ ನಿಲಯಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜೂನ್ 30ರೊಳಗೆ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜುಲೈ 31ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯನ್ನು ದೂ.ಸಂ:08371-295949 ಸಂಪರ್ಕಿಸಬಹುದು ಎಂದು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-23-464823456

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.