ಮುಂಡರಗಿ: 'ಕಸಾಪ ನೂತನ ಭವನ ನಿರ್ಮಾಣ ಸೇರಿದಂತೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಈವರೆಗೂ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಸಾಹಿತ್ಯಾಸಕ್ತರ ಗೌರವಕ್ಕೆ ಪಾತ್ರವಾಗಿದೆ. ಕಸಾಪ ವತಿಯಿಂದ ಸದ್ಯದಲ್ಲಿಯೇ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಲಾಗುವುದು' ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ಗಚ್ಚಣ್ಣವರ ತಿಳಿಸಿದರು.

ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಕಸಾಪ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಸಾಪ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಅವರು ಮಾತನಾಡಿದರು.

‘ಮಕ್ಕಳ ಬೇಸಿಗೆ ಶಿಬಿರ ಮುಗಿದ ನಂತರ ತಾಲ್ಲೂಕು ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗುವುದು. ತಾಲ್ಲೂಕಿನ ಎಲ್ಲ ಸಾಹಿತಿಗಳು ಹಾಗೂ ಅವರು ರಚಿಸಿರುವ ಗ್ರಂಥಗಳ ಪರಿಚಯ ಕುರಿತು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.

‘ಅನ್ನದಾನೀಶ್ವರ ಸ್ವಾಮೀಜಿ ಅವರ ನೆರವು ಹಾಗೂ ಮಾರ್ಗದರ್ಶನದಲ್ಲಿ ಸುಸಜ್ಜಿತ ಕಸಾಪ ಭವನ ನಿರ್ಮಾಣಗೊಂಡಿದ್ದು, ಅಲ್ಪ, ಸ್ವಲ್ಪ ಕೆಲಸ ಕಾರ್ಯಗಳು ಉಳಿದುಕೊಂಡಿವೆ. ಸಾಹಿತ್ಯ ಭವನದಲ್ಲಿ ಅನ್ನದಾನೀಶ್ವರ ಸ್ವಾಮೀಜಿ ರಚಿಸಿರುವ ನೂರಾರು ಗ್ರಂಥಗಳನ್ನು ಸಂಗ್ರಹಿಸಿ ಓದುಗರಿಗೆ ಒದಗಿಸಲು ಪ್ರಯತ್ನಿಸಲಾಗುವುದು’ ಎಂದು ತಿಳಿಸಿದರು.

ಕಸಾಪ ಕಾರ್ಯದರ್ಶಿ ಮಂಜುನಾಥ ಮುಧೋಳ ಮಾತನಾಡಿ, ಸಾಹಿತ್ಯ ಭವನ ನಿರ್ಮಾಣಕ್ಕೆ ₹ 25,000 ದೇಣಿಗೆ ನೀಡಿದವರ ಫೋಟೊ ಹಾಕಲು ಕ್ರಮ ವಹಿಸಲಾಗಿದೆ. ಇನ್ನುಳಿದ ಕೆಲಸ ಕಾರ್ಯಗಳಿಗೆ ಸಾಹಿತ್ಯಾಭಿಮಾನಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಕಸಾಪ ಉಪಾಧ್ಯಕ್ಷ ಶಂಕರ ಕುಕನೂರ, ಕೋಶಾದ್ಯಕ್ಷ ನಾಗೇಶ ಹುಬ್ಬಳ್ಳಿ, ಸದಸ್ಯರಾದ ಎಸ್.ಬಿ.ಹಿರೇಮಠ, ಸುರೇಶ ಭಾವಿಹಳ್ಳಿ, ಎನ್.ಎನ್.ಕಲಕೇರಿ, ಆರ್.ವೈ.ಪಾಟೀಲ, ಸಿ.ಕೆ.ಗಣಪ್ಪನವರ, ಐ.ಕೆ.ಮುಲ್ಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-23-1239636015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.