ಮುಂಡರಗಿ: ನೂತನ ರೈಲು ಮಾರ್ಗ ಮಂಜೂರಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆ ಹಾಗೂ ನೂತನ ರೈಲು ಮಾರ್ಗ ಜಂಟಿ ಹೋರಾಟ ಕ್ರಿಯಾ ಸಮಿತಿ ಕಾರ್ಯಕರ್ತರು ಗ್ರೇಡ್-2 ತಹಶೀಲ್ದಾರ್ ಕೆ.ರಾಧಾ ಅವರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆಯ ಸಂಚಾಲಕ ಬಸವರಾಜ ನವಲಗುಂದ ಮಾತನಾಡಿ, 'ಗದಗ, ಮುಂಡರಗಿ, ಹೂವಿನಹಡಗಲಿ ಮಾರ್ಗವಾಗಿ ಹರಪನಹಳ್ಳಿಗೆ ನೂತನ ರೈಲು ಮಾರ್ಗ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳದಿರುವುದು ತುಂಬಾ ದುರ್ದೈವದ ಸಂಗತಿ’ ಎಂದು ವಿಷಾದಿಸಿದರು.

ಪುರಸಭೆ ವ್ಯಾಪ್ತಿಯ ಬಡ ಜನರಿಗೆ ಆಶ್ರಯ ಮನೆ ನಿರ್ಮಿಸಲು ಕಳೆದ ಏಂಟು ವರ್ಷಗಳ ಹಿಂದೆ 25 ಎಕರೆ ಜಮೀನು ಖರೀದಿಸಲಾಗಿದ್ದು, ಇಲ್ಲಿಯವರೆಗೂ ಮನೆಗಳನ್ನು ನಿರ್ಮಿಸಿಕೊಡದೆ ಸರ್ಕಾರ ಬಡ ಜನತೆಯನ್ನು ವಂಚಿಸುತ್ತಲಿದೆ’ ಎಂದು ಆರೋಪಿಸಿದರು.

ಕೊಪ್ಪಳ-ಮುಂಡರಗಿ-ಶಿಗ್ಗಾಂವಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಿಸಬೇಕು. ಪಟ್ಟಣದಲ್ಲಿ ಅಂಚೆ ಕಚೇರಿ ನಿರ್ಮಿಸಲು ವಿಶಾಲವಾದ ನಿವೇಶನ ಖರೀದಿಸಲಾಗಿದೆ. ಇದುವರೆಗೂ ಅಂಚೆ ಕಚೇರಿಯು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕೂಡಲೇ ಅಂಚೆ ಕಚೇರಿ ಕಟ್ಟಡ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿದರು.

ಪಟ್ಟಣದ ಕನಕರಾಯನ ಗುಡ್ಡವನ್ನು ಪ್ರವಾಸಿ ತಾಣವನ್ನಾಗಿ ನಿರ್ಮಾಣ ಮಾಡಬೇಕು. ಕಪ್ಪತಗುಡ್ಡವನ್ನು ಅಭಿವೃದ್ಧಿ ಪಡಿಸಬೇಕು. ಈ ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮೇ.22ರಂದು ವಾರಣಾಸಿ ಚಲೋ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ದ್ರುವಕುಮಾರ ಹೂಗಾರ, ರವಿಗೌಡ ಪಾಟೀಲ, ಹನುಮಂತ ಬಚ್ಚೇನಹಳ್ಳಿ, ಜಗದೀಶ ಕಂಚಗಾರ, ಮೈನುದ್ದಿನ ಗರಡಿಮನಿ, ರೇವಣೆಪ್ಪ ಸೈದರ, ಮೈಲಪ್ಪ ದೊಡ್ಡಮನಿ, ಬಸಪ್ಪ ಬಚ್ಚೇನಹಳ್ಳಿ, ಪಾರ್ವತೆವ್ವ ದೊಡ್ಡಮನಿ, ಚಂದ್ರು ಪೂಜಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-23-1219297107

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.