ಮುಂಡರಗಿ:ತುಂಗಭದ್ರಾ ನದಿ ಪಾತ್ರದಲ್ಲಿ ಪ್ರವಾಹ

7
ಭದ್ರಾ ಜಲಾಶಯದಿಂದ ನೀರು ಹೊರಕ್ಕೆ: ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿ

ಮುಂಡರಗಿ:ತುಂಗಭದ್ರಾ ನದಿ ಪಾತ್ರದಲ್ಲಿ ಪ್ರವಾಹ

Published:
Updated:
Deccan Herald

ಮುಂಡರಗಿ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಮತ್ತು ಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಗೆ ಬಿಟ್ಟಿರುವುದರಿಂದ ತಾಲ್ಲೂಕಿನ ತುಂಗಭದ್ರಾ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದೆ.

ನದಿ ದಂಡೆಯಲ್ಲಿರುವ ವಿಠಲಾಪುರ ಹಾಗೂ ಬಿದರಳ್ಳಿ ಗ್ರಾಮಗಳು ಗುರುವಾರ ಜಲಾವೃತಗೊಂಡಿವೆ. ಈ ಗ್ರಾಮಗಳ 8ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಗ್ರಾಮದ ಹೊರವಲಯಲ್ಲಿ ಗಂಜಿ ಕೇಂದ್ರ ತೆರೆಯುವಂತೆ ತಹಶೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಂಗಟಾಲೂರು ಏತ ನೀರಾವರಿ ಯೋಜನೆಯ ಬ್ಯಾರೇಜ್‌ ಈ ಗ್ರಾಮದಿಂದ 6 ಕಿ.ಮಿ ದೂರದಲ್ಲಿದೆ. ಬ್ಯಾರೇಜ್‌ ತುಂಬಿರುವುದರಿಂದ ಎಲ್ಲ ಗೇಟುಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದ್ದು, ಬಿದರಳ್ಳಿ, ಹಮ್ಮಿಗಿ, ಸಿಂಗಟಾಲೂರ, ಶೀರನಹಳ್ಳಿ, ಗಂಗಾಪೂರ, ಕೊರ್ಲಹಳ್ಳಿ, ಕಕ್ಕೂರ, ಹೆಸರೂರು ಗ್ರಾಮಗಳ ನೂರಾರು ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಭತ್ತ, ಕಬ್ಬು, ಸೂರ್ಯಕಾಂತಿ ಬೆಳೆಗಳು ನೀರಿನಲ್ಲಿ ಮುಳುಗಿವೆ. ಹಳೆಸಿಂಗಟಾಲೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !