ಮುಂಡರಗಿ: ‘ಕನ್ನಡಾಭಿಮಾನ ಎಲ್ಲರಲ್ಲಿ ಮೂಡಿದಾಗ ಮಾತ್ರ ಕನ್ನಡ ಬೆಳೆಯುತ್ತದೆ’ ಎಂದು ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಹೇಳಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪಟ್ಟಣಕ್ಕೆ ಶನಿವಾರ ಆಗಮಿಸಿದ ಕನ್ನಡ ರಥಯಾತ್ರೆಯನ್ನು ಸ್ವಾಗತಿಸಿ ಅವರು ಮಾತನಾಡಿದರು.

‘ಮನೆ–ಮನಗಳಲ್ಲಿ ಕನ್ನಡತನವನ್ನು ಜಾಗೃತಗೊಳಿಸುವ ಉದ್ದೇಶದಿಂದ ರಾಜ್ಯಾದಾದ್ಯಂತ ಕನ್ನಡ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ. ಗಚ್ಚಣ್ಣವರ ಮಾತನಾಡಿ, ‘ಕನ್ನಡ ರಥಯಾತ್ರೆ ಸಾಗುವ ಎಲ್ಲ ಪ್ರದೇಶಗಳಲ್ಲಿ ಕನ್ನಡಾಭಿಮಾನಿಗಳು ಮತ್ತು ಸಾಹಿತ್ಯಾಸಕ್ತರು ಹುಮ್ಮಸ್ಸಿನಿಂದ ಸ್ವಾಗತಿಸುತ್ತಿದ್ದಾರೆ. ಕನ್ನಡ ರಥ ನಮ್ಮ ಅಸ್ಮಿತೆಯಾಗಿದ್ದು, ಕನ್ನಡದ ಉಳಿವಿಗೆ ಎಲ್ಲರೂ ಕಂಕಣಬದ್ಧರಾಗಬೇಕು’ ಎಂದು ತಿಳಿಸಿದರು.

ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ, ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ, ಸದಸ್ಯರಾದ ಲಿಂಗರಾಜಗೌಡ ಪಾಟೀಲ, ನಾಗರಾಜ ಹೊಂಬಳಗಟ್ಟಿ, ರಾಜಾಭಕ್ಷೀ ಬೆಟಗೇರಿ, ಮುಖಂಡರಾದ ವೀಣಾ ಪಾಟೀಲ, ಮಂಜುನಾಥ ಮುಧೋಳ, ಕೃಷ್ಣಮೂರ್ತಿ ಸಾಹುಕಾರ, ಶಿವಾನಂದ ಇಟಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.