ಮುಂಡರಗಿ: ‘ಗ್ಯಾರಂಟಿ ಯೋಜನೆ ಸೇರಿದಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹಲವಾರು ಕಾರ್ಯಕ್ರಮಗಳು ಜನತೆಯ ಜೀವನ ಮಟ್ಟವನ್ನು ಸುಧಾರಿಸಿವೆ. ಶಾಸಕ ಜಿ.ಎಸ್.ಪಾಟೀಲ ಅವರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಾ, ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿದ್ದಾರೆ’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಡಿ.ಡಿ.ಮೋರನಾಳ ತಿಳಿಸಿದರು.

ತಾಲ್ಲೂಕಿನ ಡಂಬಳ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಗ್ಯಾರಂಟಿ ಯೋಜನೆಗಳು ಜಿಲ್ಲೆಯಾದ್ಯಂತ ಸಮರ್ಪಕವಾಗಿ ಅನುಷ್ಠಾನಗೊಂಡಿದ್ದು, ಎಲ್ಲರೂ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಜಿ.ಎಸ್.ಪಾಟೀಲರು ಇನ್ನೂ ಹಲವು ಯೋಜನೆಗಳನ್ನು ತರಲಿದ್ದಾರೆ’ ಎಂದು ಭರವಸೆ ವ್ಯಕ್ತಪಡಿಸಿದರು.

ರೋಣ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ ಮಾತನಾಡಿ, ‘ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ರಾಜ್ಯದ ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಮೂಲ ಸೌಕರ್ಯ ಸುಧಾರಣೆಗೆ ಮೊದಲಾದವುಗಳಿಗೆ ಸರ್ಕಾರ ಆದ್ಯತೆ ನೀಡುತ್ತಿದೆ’ ಎಂದು ತಿಳಿಸಿದರು.

ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ ಬೆಣ್ಣಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ ಯಲಿವಾಳ ಮಾತನಾಡಿದರು.

ವೆಂಕಟಾಪುರ ಗ್ರಾಮದ ಎಸ್.ಸಿ. ಕಾಲೊನಿಯಲ್ಲಿ ಸಿ.ಸಿ.ರಸ್ತೆ ಮತ್ತು ಹೈಮಾಸ್ಕ್ ಅಳವಡಿಕೆ, ಹೈತಾಪುರ ಗ್ರಾಮದ ಎಸ್.ಸಿ. ಕಾಲೊನಿಯಲ್ಲಿ ಸಿ.ಸಿ.ರಸ್ತೆ ಕಾಮಗಾರಿ, ಮುರಡಿ ತಾಂಡಾ ಗ್ರಾಮದ ಎಸ್.ಸಿ ಕಾಲೊನಿಯಲ್ಲಿ ಸಿ.ಸಿ ರಸ್ತೆ ಮತ್ತು ಹೈಮಾಸ್ಕ್ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ರತ್ನವ್ವ ಕಾರಬಾರಿ, ಲಲಿತಾ ಪವಾರ, ಸೋಮು ಹೈತಾಪುರ, ವಿಶ್ವನಾಥ ಪಾಟೀಲ, ಸತ್ಯಪ್ಪ ಪೂಜಾರ, ಪ್ರಕಾಶ ಸಜ್ಜನ, ಗೂರಣ್ಣ ಸಂಶಿ, ವಿರುಪಣ್ಣ ಮರಿಗೌಡರ, ಮಲ್ಲೇಶ ಪೂಜಾರ, ಫಾರುಕ್ ಅಬ್ದುಲ್ ಡೋಟ್ಯಾಳ, ವೀರೇಶ ರೋಣದ, ಮಂಜುನಾಥ ಹಿರೇಮಣಿ, ಮಲ್ಲಪ್ಪ ಕೊಡ್ಲಿ, ವಸಂತ ಮಾಳಗಿಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-23-1768440063

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.