ಮುಂಡರಗಿ: ‘ತಾಲ್ಲೂಕು ಕಸಾಪ ಸಮ್ಮೇಳನ ಆಯೋಜನೆ ಹಾಗೂ ಸಮ್ಮೇಳನ ಅಧ್ಯಕ್ಷರ ಆಯ್ಕೆ ವಿರೋಧಿಸಿ ಕೆಲವರು ವಿನಾಃಕಾರಣ ವಿರೋಧ ವ್ಯಕ್ತಪಡಿಸುತ್ತಿರುವುದು ಅಸಮಂಜಸ’ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ. ಗಚ್ಚಣ್ಣವರ ತಿಳಿಸಿದರು.

ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ನೂತನ ಕಸಾಪ ಭವನದಲ್ಲಿ ತಾಲ್ಲೂಕು ಕಸಾಪ ಘಟಕದ ಕಾರ್ಯಕಾರಿಣಿ ಮಂಡಳಿ ಸದಸ್ಯರು ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ನೂತನ ಕಸಾಪ ಭವನ ನಿರ್ಮಾಣಕ್ಕೆ ನಿವೇಶನ ಹಾಗೂ ಧನ ಸಹಾಯ ಮಾಡಿದ ಅನ್ನದಾನೀಶ್ವರ ಸ್ವಾಮೀಜಿ ಆಶಯದಂತೆ ಸಾಹಿತ್ಯ ಸಮ್ಮೇಳನ ಹಾಗೂ ದಾನಿಗಳ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.

ನಿಯಮಾನುಸಾರ ಕಸಾಪ ತಾಲ್ಲೂಕು ಘಟಕದ ಕಾರ್ಯಕಾರಿ ಮಂಡಳಿ ರಚಿಸಲಾಗಿದ್ದು, ಪ್ರತಿ ಸಮುದಾಯದ ಸದಸ್ಯರನ್ನು ಒಳಗೊಂಡಿದೆ. ಸದಸ್ಯರ ಸಲಹೆಯಂತೆ ಕಾರ್ಯಚಟುವಟಿಕೆ ನಡೆಸಲಾಗುತ್ತಿದೆ. ಯಾವುದೇ ಏಕಪಕ್ಷೀಯ ನಿರ್ಣಯ ಕೈಗೊಳ್ಳುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.

ಅನ್ನದಾನೀಶ್ವರ ಸ್ವಾಮೀಜಿ ಆಶಯದಂತೆ ಜ.29ರಂದು ಸಾಹಿತ್ಯ ಸಮ್ಮೇಳನ ಬದಲು ತಾಲ್ಲೂಕು ಕನ್ನಡ ಸಮಾವೇಶ ಹಾಗೂ ದಾನಿಗಳ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಸಾಪ ಅಧ್ಯಕ್ಷ ಶಂಕರ ಕುಕನೂರ, ಮಾಜಿ ಅಧ್ಯಕ್ಷ ಎಸ್.ಬಿ. ಹಿರೇಮಠ, ಮಂಜುನಾಥ ಮುಧೋಳ, ವೀಣಾ ಪಾಟೀಲ, ಆನಂದ ರಾಮೇನಹಳ್ಳಿ, ಆರ್.ವೈ. ಪಾಟೀಲ, ಸುರೇಶ ಭಾವಿಹಳ್ಳಿ, ಸಿ.ಕೆ.ಗಣಪ್ಪನವರ, ಕೃಷ್ಣಾ ಸಾಹುಕಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.