ಮುಂಡರಗಿ: ಕನ್ನಡ ಸಾಹಿತ್ಯ ಪರಿಷತ್ತ ತಾಲ್ಲೂಕು ಘಟಕವು ಮೇ23ರಂದು ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ಕಸಾಪ ಭವನದಲ್ಲಿ ತಾಲ್ಲೂಕು ಮಹಿಳಾ ಸಾಹಿತ್ಯ ಸಮಾವೇಶವನ್ನು ಹಮ್ಮಿಕೊಂಡಿದೆ.

ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಅನ್ನದಾನೀಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿಕೊಳ್ಳಲಿದ್ದಾರೆ. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಶಾಸಕ ಡಾ.ಚಂದ್ರು ಲಮಾಣಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಜಿ.ಎಸ್.ಪಾಟೀಲ ಗ್ರಂಥ ಬಿಡುಗಡೆಗೊಳಿಸಲಿದ್ದಾರೆ.

ಲೇಖಕಿ ವೀಣಾ ಪಾಟೀಲ ಆಶಯ ನುಡಿಗಳನ್ನಾಡಲಿದ್ದಾರೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಗಿರಿಜಾ ಹಿರೇಮಠ, ಎಂ.ಜಿ.ಗಚ್ಚಣ್ಣವರ ಹಾಗೂ ಮತ್ತಿತರರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

11.30ಗಂಟೆಗೆ ಕಲೆ, ಸಾಹಿತ್ಯ, ಶಿಕ್ಷಣ ಹಾಗೂ ತಂತ್ರಜ್ಞಾನ ಕುರಿತ ಮೊದಲ ಗೋಷ್ಠಿ ನಡೆಯಲಿದೆ. ಕ್ಷಮಾ ವಸ್ತ್ರದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಚಂದ್ರಕಲಾ ಇಟಗಿಮಠ ಹಾಗೂ ಶಕುಂತಲಾ ಹಂಪಿಮಠ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಮಧ್ಯಾಹ್ನ 1ಗಂಟೆಗೆ ಸ್ವಾವಲಂಬನೆಯತ್ತ ಮಹಿಳೆ ಕುರಿತು 2ನೇ ಗೋಷ್ಠಿ ನಡೆಯಲಿದ್ದು, ರಶ್ಮಿ ಅಂಗಡಿ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಶಿವಲೀಲಾ ಹುಣಸಗಿ ಹಾಗೂ ಪ್ರಭಾವತಿ ಬೆಳವಣಕಿಮಠ ಉಪನ್ಯಾಸ ನೀಡಲಿದ್ದಾರೆ. 3.30ಗಂಟೆಗೆ ಕವಿ ಗೋಷ್ಠಿ ಜರುಗಲಿದ್ದು, ಶೋಭಾ ಮೇಟಿ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಹಲವು ಕವಿಯತ್ರೆಯರು ಭಾಗವಹಿಸಲಿದ್ದಾರೆ. ಸಂಜೆ 4.30 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಮಾಜಿ ಸಚಿವ ಎಸ್.ಎಸ್.ಪಾಟೀಲ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಮುಖಂಡರಾದ ಕೆ.ವಿ.ಹಂಚಿನಾಳ, ಆನಂದಗೌಡ ಪಾಟೀಲ, ಅನಸೂಯಾ ಅಂಗಡಿ, ವೆಂಕಟಪ್ಪ ನಾಯಕ, ಎಂ.ಜಿ.ಗಚ್ಚಣ್ಣವರ ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-23-541226065

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.