ಲಕ್ಷ್ಮೇಶ್ವರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಪುರಸಭೆ ಪೌರ ನೌಕರರು ಹಾಗೂ ಪೌರ ಕಾರ್ಮಿಕರು ಮಂಗಳವಾರದಿಂದ ಆರಂಭಿಸಿರುವ ಮುಷ್ಕರ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಪೌರ ಕಾರ್ಮಿಕರು ಊರಿನ ಸ್ವಚ್ಛತೆಗೆ ಬಾರದೇ ಇರುವುದರಿಂದ ಪಟ್ಟಣದ ಮೂಲೆ ಮೂಲೆಗಳಲ್ಲಿ ಹಾಗೂ ಆಯಕಟ್ಟಿನ ಜಾಗೆಗಳಲ್ಲಿ ಕಸದ ರಾಶಿ ತುಂಬಿಕೊಂಡಿದೆ. ಸರ್ಕಾರಿ ನಿವೃತ್ತ ನೌಕರರ ಸಂಘದ ಸದಸ್ಯ ಪೂರ್ಣಾಜಿ ಖರಾಟೆ ಅವರು ಬುಧವಾರ ಮುಷ್ಕರ ನಡೆಸುವವರಿಗೆ ಬೆಂಬಲ ಸೂಚಿಸಿದರು.

ನಂತರ ಮಾತನಾಡಿದ ಅವರು ‘ಪೌರ ಕಾರ್ಮಿಕರು ಒಂದು ದಿನ ಕೆಲಸ ಮಾಡದಿದ್ದರೆ ಇಡೀ ಊರು ಗಬ್ಬೆದ್ದು ನಾರುತ್ತದೆ. ಅಲ್ಲದೆ ನೀರು ಪೂರೈಕೆದಾರರು ಇದೇ ರೀತಿ ಮುಷ್ಕರ ನಡೆಸಿದರೆ ಜನತೆಗೆ ನೀರಿನ ಸಮಸ್ಯೆ ಉಂಟಾಗಲಿದೆ. ಇಂಥ ಕೆಲಸ ಮಾಡುವವರ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು. ಲಕ್ಷ್ಮೇಶ್ವರ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ಪೌರ ಕಾರ್ಮಿಕರನ್ನು ನೇಮಕ ಮಾಡುವುದು ಸರ್ಕಾರದ ಜವಾಬ್ದಾರಿ. ಸದ್ಯ ಕಾರ್ಮಿಕರ ಸಂಖ್ಯೆ ಕಡಿಮೆ ಇರುವುದರಿಂದ 23 ವಾರ್ಡ್ಗಳಲ್ಲೂ ಸ್ವಚ್ಛತೆ ಮಾಡುವುದು ಇರುವ ಕಾರ್ಮಿಕರಿಗೆ ಹೊರೆ ಆಗುತ್ತಿದೆ. ಹಾಗಾಗಿ ಸರ್ಕಾರ ಹೆಚ್ಚಿನ ಪೌರ ಕಾರ್ಮಿಕರನ್ನು ನೇಮಕ ಮಾಡಬೇಕು.ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಕಾಯಂಗೊಳಿಸಬೇಕು’ ಎಂದು ಆಗ್ರಹಿಸಿದರು.

ಮಾಜಿ ಶಾಸಕರಿಂದ ಬೆಂಬಲ: ಪುರಸಭೆ ಪೌರ ನೌಕರರ ಮುಷ್ಕರಕ್ಕೆ ಮಾಜಿ ಶಾಸಕ ರಾಮಣ್ಣ ಲಮಾಣಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಮುಷ್ಕರ ನಿರತರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಬೇಗನೇ ಬಗೆಹರಿಸಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯ ಕರಡಿ, ಸದಸ್ಯ ರಾಮಣ್ಣ ಗಡದವರ ಸಹ ಬೆಂಬಲ ಸೂಚಿಸಿದ್ದಾರೆ.

ಎನ್.ಆರ್. ಸಾತಪುತೆ, ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ಪುರಸಭೆ ಕಚೇರಿ ವ್ಯವಸ್ಥಾಪಕಿ ಮಂಜುಳಾ ಹೂಗಾರ, ಹನಮಂತಪ್ಪ ನಂದೆಣ್ಣವರ, ಬಸಣ್ಣ ನಂದೆಣ್ಣವರ, ಪರಶುರಾಮ ಮುಳಗುಂದ, ಮಂಜುನಾಥ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.