ಗದಗ: ಹಣ್ಣಿನ ವ್ಯಾಪಾರಿ ಮುತ್ತು ಚಲವಾದಿ (27) ಎಂಬುವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ರಾತ್ರಿ ಗದುಗಿನಲ್ಲಿ ನಡೆದಿದೆ.

ವಿವೇಕಾನಂದ ರಸ್ತೆಯ ನಿವಾಸಿಯಾದ ಮುತ್ತು ಅವರನ್ನು ನಗರದ ತೀಸ್ ಬಿಲ್ಡಿಂಗ್ ಬಳಿ ದುಷ್ಕರ್ಮಿಗಳು ಚಾಕುವಿನಿಂದ ಹಿರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕತ್ತು, ಎದೆ, ಹೊಟ್ಟೆ ಹಾಗೂ ತಲೆಯ ಭಾಗಕ್ಕೆ ಚಾಕುವಿನಿಂದ ಹಿರಿಯಲಾಗಿದೆ.

‘ಕೊಲೆಯಾದ ಮುತ್ತು ಮತ್ತು ಆತನ ಗೆಳೆಯನ ನಡುವೆ ಹಣಕಾಸಿನ ವ್ಯವಹಾರ ನಡೆದಿತ್ತು. ಇದೇ ಕಾರಣಕ್ಕೆ ಭಾನುವಾರ ರಾತ್ರಿ ಕೊಲೆ ನಡೆದಿದೆ. ಆರೋಪಿಗಳ ಪತ್ತೆಗೆ ಪೊಲೀಸರ ತಂಡ ರಚಿಸಲಾಗಿದ್ದು, ಶೀಘ್ರ ಬಂಧಿಸಲಾಗುವುದು’ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಗದಗ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.