ಬುಧವಾರ, ಮೇ 18, 2022
23 °C
‘ರಾಜ್ಯದೆಲ್ಲೆಡೆ ಕ್ರೈಸ್ತರಿಂದ ದೊಡ್ಡ ಪ್ರಮಾಣದಲ್ಲಿ ಮತಾಂತರ’

ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುತಾಲಿಕ್‌ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ‘ಜಿಲ್ಲೆಯೂ ಸೇರಿದಂತೆ ರಾಜ್ಯದೆಲ್ಲೆಡೆ ಕ್ರೈಸ್ತರು ದೊಡ್ಡ ಪ್ರಮಾಣದಲ್ಲಿ ಮತಾಂತರ ಮಾಡುತ್ತಿದ್ದಾರೆ. ಮತಾಂತರವೆಂಬುದು ಒಂದು ಕ್ರೌರ್ಯ ಹಾಗೂ ಹೀನವಾದದ್ದು. ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಕಟ್ಟುನಿಟ್ಟಿನ ಕ್ರಮವಹಿಸಬೇಕು’ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್‌ ಆಗ್ರಹಿಸಿದರು.

ಅವರು ಗದುಗಿನಲ್ಲಿ ಭಾನುವಾರ ಮಾಧ್ಯಮದವರ ಜತೆಗೆ ಮಾತನಾಡಿ, ‘ಕೆಲವು ಕಡೆಗಳಲ್ಲಿ ಇಡೀ ಲಂಬಾಣಿ ತಾಂಡಾಗಳನ್ನೇ ಮತಾಂತರ ಮಾಡಿದ ಉದಾಹರಣೆಗಳಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಂತಹ ಅಪಾಯದ ಸ್ಥಿತಿಯನ್ನು ಅರಿತೇ ಆರ್‌ಎಸ್‌ಎಸ್‌ ಪ್ರಮುಖ ಮೋಹನ ಭಾಗವತ್ ಸಹ ಉಲ್ಲೇಖ ಮಾಡಿದ್ದಾರೆ. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವ ಅವಶ್ಯಕತೆ ಇದೆ’ ಎಂದು ಅವರು ಹೇಳಿದರು.

‘ಟಿಪ್ಪು ಜಯಂತಿಯನ್ನು ರಾಜಕೀಯ ಕಾರಣಕ್ಕಷ್ಟೇ ಆಚರಿಸಲಾಗುತ್ತಿದೆ. ಮುಸ್ಲಿಂ ಓಟ್ ಬ್ಯಾಂಕ್‍ಗಾಗಿ ಕಾಂಗ್ರೆಸ್ ಏನು ಬೇಕಾದರೂ ಮಾಡುತ್ತದೆ. ಮುಸ್ಲಿಂ ಸಮುದಾಯದ ತುಷ್ಟೀಕರಣ ಪ್ರಾರಂಭ ಮಾಡಿದ್ದೇ ಕಾಂಗ್ರೆಸ್. ಅದು ಕಾಂಗ್ರೆಸ್ (ಐ) ಅಲ್ಲ. ‘ಕಾಂಗ್ರೆಸ್ ಇಸ್ಲಾಂ’ ಎಂದು ವ್ಯಂಗ್ಯವಾಡಿದರು.

‘96 ವರ್ಷಗಳಿಂದ ಆರ್‌ಎಸ್‌ಎಸ್‌ ಶಿಸ್ತು ಬದ್ಧವಾಗಿ ಕೆಲಸ ಮಾಡುತ್ತಿದೆ. ಆದರೆ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಮುಸ್ಲಿಂ ಮತಗಳಿಗಾಗಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಟೀಕಿಸುತ್ತಿದ್ದಾರೆ’ ಎಂದು ದೂರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು