ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಂಬಳ: ನಾಡ ಕಚೇರಿಗೆ ಹೊಸ ಕಟ್ಟಡ, ಹಲವು ವರ್ಷಗಳ ಬೇಡಿಕೆ ಈಡೇರಿಕೆ

Last Updated 5 ಸೆಪ್ಟೆಂಬರ್ 2020, 8:57 IST
ಅಕ್ಷರ ಗಾತ್ರ

ಡಂಬಳ: ನಾಡ ಕಚೇರಿ ಕಟ್ಟಡ ಶಿಥಿಲಗೊಂಡು ಹಲವು ವರ್ಷಗಳೇ ಕಳೆದಿದ್ದು, ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಹೊಸಕಟ್ಟಡ ಕಾಮಗಾರಿ ನಿರ್ಮಾಣಕ್ಕೆ ಈಗ ಅನುದಾನ ಬಿಡುಗಡೆಯಾಗಿದ್ದು ಹಳೆಯ ಕಟ್ಟಡ ನೆಲಸಮ ಕಾರ್ಯ ತ್ವರಿತವಾಗಿ ನಡೆದಿದೆ. ₹ 18.8 ಲಕ್ಷ ವೆಚ್ಚದಲ್ಲಿ ಹೊಸ ಕಟ್ಟಡ ಕಾಮಗಾರಿ ನಡೆಯಲಿದೆ.

ಸರ್ಕಾರ 2018-19ನೇ ಸಾಲಿನ ಆಯುವ್ಯಯದಲ್ಲಿ ನಾಡ ಕಚೇರಿಗೆ ಮೂಲ ಸೌಕರ್ಯ ಕಲ್ಪಿಸಲು ಅನುದಾನ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಸ್ವಂತ ಕಟ್ಟಡ ನಿರ್ಮಾಣ ಕುರಿತು ಸಾಂಪ್ರಾದಾಯಿಕ ಶೈಲಿಯ ಮಾದರಿ ಕಟ್ಟಡ ನಿರ್ಮಾಣಕ್ಕೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು ₹ 25 ಲಕ್ಷ ಮೊತ್ತದ ಅಂದಾಜು ಪ್ರಸ್ತಾವ ಸಿದ್ಧಪಡಿಸಿ ಆಡಳಿತಾತ್ಮಕ ಮಂಜೂರಾತಿಗಾಗಿ ಆಟಲ್ ಜೀ ಜನಸ್ನೇಹಿ ನಿರ್ದೇಶನಾಲಯಕ್ಕೆ ಕಳುಹಿಸಿದ್ದರು.

ಹೊಸ ಕಟ್ಟಡದಲ್ಲಿ ಉಪತಹಶೀಲ್ದಾರ್ ಕೊಠಡಿ, ಕಂದಾಯ ನಿರೀಕ್ಷಕರ ಕೊಠಡಿ, ಗ್ರಾಮ ಲೆಕ್ಕಾಧಿಕಾರಿ ಕೊಠಡಿ, ಆಧಾರ್ ಕಾರ್ಡ್‌, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವೃದ್ಧಾಫ್ಯ ವೇತನ ಸೇರಿದಂತೆ ಇತರೆ ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಲು ಪ್ರತ್ಯೇಕ ಕೊಠಡಿ ನಿರ್ಮಿಸಲಾಗುತ್ತದೆ. ಸಭೆ ನಡೆಸಲು ಪ್ರತ್ಯೇಕ ಕೊಠಡಿ, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಶ್ರಾಂತಿ ಗೃಹ, ಕಟ್ಟಡದ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತದೆ. ಕಟ್ಟಡ ನಿರ್ಮಾಣವಾದರೆ ಸಾರ್ವಜನಿಕರ ಪರದಾಟ ತಪ್ಪಲಿದೆ. ಹಲವು ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ.

ಹಳೆಯ ಕಟ್ಟಡದ ಸುತ್ತಲು ಹಲವು ವರ್ಷಗಳಿಂದ ಗೊಡಂಗಡಿ, ಕಿರಾಣಿ ಅಂಗಡಿ, ಚಹಾ ಅಂಗಡಿ ಇವೆ. ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಅವುಗಳನ್ನು ಸ್ಥಳಾಂತರ ಮಾಡುವಂತೆ ನೋಟಿಸ್ ನೀಡಲಾಗಿತ್ತು. ವ್ಯಾಪಾರಿಗಳು ಸಹ ಸಹಕಾರ ನೀಡಿದ್ದಾರೆ ಎಂದು ಉಪ ತಹಶೀಲ್ದಾರ್ ಸಿ.ಕೆ ಬಳೂಟಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT