ಗಜೇಂದ್ರಗಡ: ತಾಲ್ಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿದ ಬಳಿಕ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ಎಂದು ಗ್ರಾಮಸ್ಥರು ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಲ್ಲೂಕಿನ ಕಲ್ಲಿಗನೂರ ಹಾಗೂ ನಾಗೇಂದ್ರಗಡ ಗ್ರಾಮಗಳಲ್ಲಿ ನೆಟ್ವರ್ಕ್ ಸಮ್ಯೆಯಿಂದಾಗಿ ಸಮೀಕ್ಷೆಗೆ ಹಿನ್ನಡೆಯಾದ ಕಾರಣ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ, ನೆಟ್ವರ್ಕ್ ಲಭ್ಯವಿರುವ ಲಕ್ಕಲಕಟ್ಟಿ ಗ್ರಾಮಕ್ಕೆ ದಿನಕ್ಕೆ 10 ಕುಟುಂಬಗಳನ್ನು ಕರೆ ತಂದು ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದರು.

ಗ್ರಾಮಸ್ಥರು ಲಕ್ಕಲಕಟ್ಟಿ ಗ್ರಾಮಕ್ಕೆ ಬರಲು ನಿರಾಕರಿಸಿದ ಕಾರಣ ಎರಡೂ ಗ್ರಾಮಗಳಿಗೆ ಬಿಎಸ್ಎನ್ಎಲ್ ಕೇಬಲ್ ಮೂಲಕ ನೆಟ್ವರ್ಕ್ ಸಂಪರ್ಕ ಕಲ್ಪಿಸಿ ಸಮೀಕ್ಷೆ ಆರಂಭಿಸಲಾಗಿತ್ತು.

ನಾಗೇಂದ್ರಗಡ ಗ್ರಾಮದಲ್ಲಿ ಸುಮಾರು 480 ಕುಟುಂಬಗಳಿದ್ದು, ನೆಟ್ವರ್ಕ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿದ ಬಳಿಕ ಸಮೀಕ್ಷೆ ನಡೆಸಿ ಎಂದು ಸಮೀಕ್ಷೆ ವಿರೋಧ ವ್ಯಕ್ತಪಡಿಸಿದರು.

‘ಹಲವು ವರ್ಷಗಳಿಂದ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿದ್ದು, ಗ್ರಾಮದ ನೂರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಬೇರೆ ಗ್ರಾಮಗಳಿಗೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಕಾರಣ ನೆಟ್ವರ್ಕ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು’ ಎಂದು ಗ್ರಾಮಸ್ಥರಾದ ಪರಶುರಾಮ ಆಡಿನ, ಶ್ರೀಧರ ಹಾಳಕೇರಿ ಒತ್ತಾಯಿಸಿದರು.

‘ನೆಟ್ವರ್ಕ್ ಸಮಸ್ಯೆಯಿಂದಾಗಿ ಉದ್ಯೋಗ ಖಾತ್ರಿ ಯೋಜನೆಯಿಂದ ವಂಚಿತರಾಗುತ್ತಿದ್ದೇವೆ. ಸರ್ಕಾರದ ಹಲವು ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಚುನಾವಣೆ ಬಂದಾಗ ಮತ ಕೇಳಲು ಬರುವ ಜನಪ್ರತಿನಿಧಿಗಳು ನಮ್ಮ ಸಮಸ್ಯೆಗೆ ಪರಿಹಾರ ಒದಗಿಸುತ್ತಿಲ್ಲ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಮೊಬೈಲ್ ಟವರ್ ಅಳವಡಿಕೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಮೂರು ಸ್ಥಳಗಳಲ್ಲಿ ಬಿಎಸ್ಎನ್ಎಲ್ ಮೊಡೆಮ್ ಅಳವಡಿಸಲಾಗಿದ್ದು ಅವುಗಳಿಂದ 100 ಮೀ. ಸುತ್ತಳತೆಯಲ್ಲಿ ಇಂಟರ್ನೆಟ್ ಸೌಲಭ್ಯ ಪಡೆಯಬಹುದಾಗಿದೆ
ಕಿರಣಕುಮಾರ ಕುಲಕರ್ಣಿ ತಹಶೀಲ್ದಾರ್ ಗಜೇಂದ್ರಗಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.