ನರಗುಂದ: ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು. ಇದನ್ನು ಜಾರಿಗೊಳಿಸದೇ ರಾಜ್ಯ ಸರ್ಕಾರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿರುವುದನ್ನು ವಿರೋಧಿಸಿ ಪಟ್ಟಣದಲ್ಲಿ ಶುಕ್ರವಾರ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಒಕ್ಕೂಟದ ಸದಸ್ಯರು ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕೆಲ ಕಾಲ ಸಂಚಾರಕ್ಕೆ ತೊಂದರೆ ಉಂಟಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಮುಖಂಡ ಮುತ್ತು ಸುರಕೋಡ, ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು. ಇದನ್ನು ಜಾರಿ ಮಾಡದೇ ಸಚಿವ ಸಂಪುಟದಲ್ಲಿ ಅನುಮೋದನೆಯಾಗಿರುವ 56,432 ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡುತ್ತಿರುವುದು ಖಂಡನೀಯ ಎಂದರು.

ಹಳೆ ಮೀಸಲಾತಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ನಮ್ಮ ಸಂಪೂರ್ಣ ವಿರೋಧವಿದೆ. ಇದರಿಂದ ನಮ್ಮ ಮಾದಿಗ ಮತ್ತು ಸಂಬಂಧಿತ ಸಮುದಾಯದ ವಿದ್ಯಾರ್ಥಿಗಳಿಗೆ ಬಹು ದೊಡ್ಡ ಅನ್ಯಾಯವಾಗಲಿದೆ. ಯಾವುದೇ ಕಾರಣದಿಂದಲೂ ಒಳಮೀಸಲಾತಿ ಪಡೆಯದೆ ಹೋದರೆ ಘೋರ ನರಕಯಾತನೆ ಅನುಭವಿಸಬೇಕಾಗುತ್ತದೆ. ಈಗ ಈ ಸರ್ಕಾರದ ಧೋರಣೆ ನೋಡಿದಾಗ ನಮ್ಮ ಸಮಾಜಕ್ಕೆ ಅನ್ಯಾಯವಾಗುತ್ತಿದೆ. ಇದನ್ನು ಸಹಿಸುವುದಿಲ್ಲ.
ಒಂದು ವೇಳೆ ನ್ಯಾಯಾಲಯದ ಆದೇಶ ಉಲ್ಲಂಘನೆಯಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಅವರು ಎಚ್ಚರಿಸಿದರು.

ಇದೇ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಪರಶುರಾಮ ಕಲಾಲರಿಗೆ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ವಸಂತ ಜೋಗಣ್ಣವರ, ದತ್ತಾತ್ರೇಯ ಜೋಗಣ್ಣವರ, ಮಹಾಂತೇಶ ಪೂಜಾರ, ವಿಜಯ ಹೊಸಮನಿ, ಗೋಪಾಲ ದ್ಯಾವಣ್ಣವರ, ಮೈಲಾರಪ್ಪ ಹಿರೇಮನಿ, ನಾಗಪ್ಪ. ಮೂಗನೂರ, ವೆಂಕಟೇಶ್ ಕಾನಪೇಠ, ಅಶೋಕ ಮಾದರ, ಗುರುನಾಥ್ ಕೆಂಗರಕರ, ಮಂಜುನಾಥ್ ಅರಕೇರಿ, ಪ್ರಶಾಂತ ತಡಸಿ ಸೇರಿದಂತೆ ಮಾದಿಗ ಸಮಾಜದ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.