ನರಗುಂದ: ಅತಿವೃಷ್ಟಿಯಿಂದ ಹೆಸರು ಬೆಳೆ ಹಾಳಾಗಿದ್ದು, ಈಗಿರುವ ಸ್ಥಿತಿಯಲ್ಲಿಯೇ ಸರ್ಕಾರ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಿ ಖರೀದಿಸಬೇಕು ಎಂದು ಬಸವರಾಜ ಸಾಬಳೆ ನೇತೃತ್ವದಲ್ಲಿ ರೈತ ಸಂಘದ ಸದಸ್ಯರು ಮಂಗಳವಾರ ಎಪಿಎಂಸಿ ಆವರಣದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಬಸವರಾಜ ಸಾಬಳೆ ಮಾತನಾಡಿ, ‘ಅತಿವೃಷ್ಟಿಯಿಂದ ಹೆಸರು ಬೆಳೆ ಹಾಳಾಗಿದೆ ಆದ್ದರಿಂದ ಇರುವ ಸ್ಥಿತಿಯಲ್ಲಿ ಹೆಸರು ಕಾಳನ್ನು ₹ 8.768 ಬೆಂಬಲ ಬೆಲೆ ನೀಡಿ ಖರೀದಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿ ಎಕರೆಗೆ ₹ 25 ಸಾವಿರ ಬೆಳೆಹಾನಿ ಪರಿಹಾರ ನೀಡಬೇಕು. ರೈತರು ಹೆಸರು, ಹತ್ತಿ, ಮೆಕ್ಕೆಜೋಳ, ಈರುಳ್ಳಿ ಮುಂತಾದ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ್ದು, ಒಂದು ವಾರದೊಳಗೆ ಎಲ್ಲ ರೈತರ ಖಾತೆಗಳಿಗೆ ಬೆಳೆ ವಿಮೆ ಹಣ ಜಮೆ ಮಾಡಬೇಕು’ ಎಂದು ಆಗ್ರಹಿಸಿದರು.

ಮನೋಹರ ಹುಯಿಲಗೋಳ, ಈರಮ್ಮ ಮೇಟಿ, ಎಂ.ಎನ್. ಮುಲ್ಲಾ, ರವಿ ಒಡೆಯರ, ಚನ್ನು ನಂದಿ, ಈರಣ್ಣ ಸೊಪ್ಪಿನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.