ನರಗುಂದ: ‘ನರೇಗಾ ಯೋಜನೆಯಡಿ ರೈತರ ಹೊಲಗಳಲ್ಲಿ ಬದು ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. ಪರಿಶಿಷ್ಟ ಸಮುದಾಯದ ನರೇಗಾ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಾಲ್ಲೂಕಿನ ಬನಹಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ಗಣಿ ಹೇಳಿದರು.

ತಾಲ್ಲೂಕಿನ ಬನಹಟ್ಟಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿರುವ ಸಮುದಾಯ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಮಾತನಾಡಿದರು.

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನರೇಗಾ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಕೂಲಿ ಕೆಲಸ ಸಿಗುತ್ತಿಲ್ಲವೆಂದು ಚಿಂತಿಸಬೇಡಿ. ನರೇಗಾ ಯೋಜನೆಯಡಿ ಕೆಲಸ ಕೊಡಲು ಗ್ರಾಮ ಪಂಚಾಯಿತಿ ಸಿದ್ಧವಿದೆ. ಇದು ಬನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಕಾರ್ಮಿಕರಿಗೆ ಅನುಕೂಲಕರವಾಗಿದೆ’ ಎಂದರು.

‘ನರೇಗಾ ಉದ್ಯೋಗ ಚೀಟಿಯನ್ನು ಗ್ರಾಮ ಪಂಚಾಯಿತಿ ವತಿಯಿಂದ ಉಚಿತವಾಗಿ ಕೊಡಲಾಗುತ್ತದೆ. ನರೇಗಾದ ಉದ್ಯೋಗ ಚೀಟಿ ಜೊತೆ ಇ–ಕೆವೈಸಿ ಕಡ್ಡಾಯವಾಗಿ ಮಾಡಿಸಬೇಕು. ಪುರುಷ ಹಾಗೂ ಮಹಿಳಾ ಕಾರ್ಮಿಕರಿಗೆ ದಿನಕ್ಕೆ ₹370 ಕೂಲಿಯನ್ನು ಸಮಾನವಾಗಿ ನೀಡಲಾಗುತ್ತದೆ. ಕೆಲಸಕ್ಕಾಗಿ ವಲಸೆ ಹೋಗದೆ, ವಾಸವಿರುವ ಊರಿನಲ್ಲೇ ನರೇಗಾದಡಿ ಕೆಲಸ ಪಡೆಯಬೇಕು’ ಎಂದು ತಿಳಿಸಿದರು.

‘ನರೇಗಾ ಐಇಸಿ ಚಟುವಟಿಕೆ ಮೂಲಕ ಬನಹಟ್ಟಿ ಗ್ರಾಮದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾಲೊನಿಗಳಲ್ಲಿ ಕೈಗೊಂಡ ವಿಶೇಷ ಅಭಿಯಾನದ ಪರಿಣಾಮ ಹೆಚ್ಚಿನ ಪ್ರಮಾಣದಲ್ಲಿ ನರೇಗಾ ಕಾರ್ಮಿಕರು ಕೆಲಸಕ್ಕೆ ಹಾಜರಾಗಿದ್ದಾರೆ’ ಎಂದು ಅಧಿಕಾರಿಗಳು ಹೇಳಿದರು.

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಾಳಪ್ಪ ಪೂಜಾರ, ಸಿಬ್ಬಂದಿ ಶಿವನಪ್ಪ ಕಲ್ಲಾಪೂರ, ನರೇಗಾ ಸಿಬ್ಬಂದಿ ಸುನೀಲ ಶಿರೋಳ, ಮಂಜುನಾಥ ನಾಡಗೌಡ ಮತ್ತು ಕಾಯಕಬಂಧು ತಳವಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-23-1788712566

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.