ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ₹ 7.18 ಲಕ್ಷ ಮೌಲ್ಯದ ಗಾಂಜಾ ನಾಶ

Last Updated 26 ಜೂನ್ 2021, 13:03 IST
ಅಕ್ಷರ ಗಾತ್ರ

ಗದಗ: ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿನ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡಿದ್ದ 48 ಕೆ.ಜಿ. ಗಾಂಜಾವನ್ನು ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಎನ್ವಿರೋಟೆಕ್‌ ಪ್ರೈವೇಟ್‌ ಲಿಮಿಟೆಡ್‌ನಲ್ಲಿ ಶನಿವಾರ ನಾಶಪಡಿಸಲಾಯಿತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ಮಾತನಾಡಿ, ‘ಗದಗ ಜಿಲ್ಲಾ ಪೊಲೀಸ್‌ ವತಿಯಿಂದ 2017ರಿಂದ ಇಲ್ಲೀವರೆಗೆ ವಿವಿಧ ಪೊಲೀಸ್‌ ಠಾಣೆಯಲ್ಲಿ ಜಪ್ತಿ ಮಾಡಲಾದ ₹ 7.18 ಲಕ್ಷ ಮೌಲ್ಯದ ಗಾಂಜಾ, ಮಾದಕ ವಸ್ತುಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದಂದು ನಾಶ ಮಾಡಲಾಯಿತು’ ಎಂದು ತಿಳಿಸಿದರು.

ಗದಗ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟರ, ನರಗುಂದ ಡಿವೈಎಸ್‌ಪಿ ಶಂಕರ ಎಂ.ರಾಗಿ, ಜಿಲ್ಲಾ ಪರಿಸರ ಮಾಲಿನ್ಯ ಮಂಡಳಿ ಅಧಿಕಾರಿ ಶಶಿಧರ ಶಂಭಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT