ನರೇಗಲ್: ಜೈ ಭೀಮ ಸೇನಾ ರಾಜ್ಯ ಸಂಘರ್ಷ ಸಮಿತಿ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಅಭಿಮಾನಿ ಬಳಗ ಮತ್ತು ಜಿ. ಎಸ್. ಪಾಟೀಲ ಅವರ ಅಭಿಮಾನಿ ಬಳಗದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತ್ಯುತ್ಸವ ಆಚರಣೆಯನ್ನು ಮೇ 16 ರಂದು ಸಂಜೆ 4 ಗಂಟೆಗೆ ನರೇಗಲ್ ಪಟ್ಟಣದ ಅಂಬೇಡ್ಕರ್ ಸರ್ಕಲ್ ಹಳೇ ಬಸ್ ನಿಲ್ದಾಣ ಸಮೀಪದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಜೈ ಭೀಮ ಸೇನಾ ರಾಜ್ಯ ಸಂಘರ್ಷ ಸಮಿತಿ ರಾಜ್ಯ ಘಟಕದ ಉಪಾಧ್ಯಕ್ಷ ಮೈಲಾರಪ್ಪ ವೀ. ಚಳ್ಳಮರದ ಹೇಳಿದರು.

ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾರ್ಯಕ್ರಮದ ಸಾನ್ನಿಧ್ಯವನ್ನು ಗದಗ ವೀರೇಶ್ವರ ಪುಣ್ಯಶ್ರಮ ಕಲ್ಲಯ್ಯಜ್ಜನವರು, ನರೇಗಲ್ ಹಿರೇಮಠ ಮಲ್ಲಿಕಾರ್ಜುನ ಶಿವಾಚಾರ್ಯರು, ರೋಣ ಬೂದಿಶ್ವರಮಠದ ವಿಶ್ವನಾಥ ಸ್ವಾಮೀಜಿ, ನರೇಗಲ್ ದರ್ಗಾದ ಸಯ್ಯದ್ ಮಂಜೂರ ಹುಸೇನ ಶ್ಯಾವಲಿಯವರು, ಇಟಗಿಯ ಶಿವಶರಣ ಗೆದಿಗೆಪ್ಪಜ್ಜನವರು, ಸೂಡಿ ಮರುಳು ಶಿದ್ದೇಶ್ವರ ಸ್ವಾಮಿಗಳು ವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಣ ಶಾಸಕ ಜಿ. ಎಸ್. ಪಾಟೀಲ ವಹಿಸುವರು. ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರು ಅಂಬೇಡ್ಕರ್ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ರೋಣ ಶಾಸಕ ಜಿ.ಎಸ್. ಪಾಟೀಲರಿಗೆ ಜೈ ಭೀಮ್ ರತ್ನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅಷ್ಟೇ ಅಲ್ಲದೆ ಸರ್ಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಾದಿಗ ಸಮುದಾಯದವರಿಗೆ ಸನ್ಮಾನ ಹಾಗೂ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ನಡೆಯಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-23-2019078492

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.