ನರೇಗಲ್: ರೋಣ ಶಾಸಕ ಜಿ. ಎಸ್. ಪಾಟೀಲ ಅವರ 78ನೇ ಜನ್ಮದಿನದ ಅಂಗವಾಗಿ ನರೇಗಲ್ ಕಾಂಗ್ರೆಸ್ ಘಟಕದ ವತಿಯಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು, ಬ್ರೆಡ್ ಹಾಗೂ ಬಿಸ್ಕತ್ತುಗಳನ್ನು ಶುಕ್ರವಾರ ವಿತರಣೆ ಮಾಡಲಾಯಿತು.

ಕಾಂಗ್ರೆಸ್ ಪ್ರಚಾರ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಮೈಲಾರಪ್ಪ ವೀ. ಚಳ್ಳಮರದ ಮಾತನಾಡಿ, ಶಾಸಕರು ನರೇಗಲ್ ಪಟ್ಟಣದ ಅಭಿವೃದ್ದಿಗೆ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದಾರೆ. ಇಳಿ ವಯಸ್ಸಿನಲ್ಲೂ ಯುವಕರಂತೆ ಸಂಘಟನೆ ಮಾಡುವ ಶಾಸಕರು ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.

ಪ್ರಚಾರ ಸಮಿತಿಯ ಸಂಯೋಜಕ ಅಲ್ಲಾಬಕ್ಷಿ ನದಾಫ್ ಮಾತನಾಡಿ, ತಾಲ್ಲೂಕಿನ ಹಿರಿಯ ರಾಜಕಾರಣಿಗಳಾಗಿ ಪಕ್ಷಾತೀತವಾಗಿ ಎಲ್ಲರನ್ನೂ ಪ್ರೀತಿಸುತ್ತಾರೆ. ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ನಿಂಗನಗೌಡ ಲಕ್ಕನಗೌಡ್ರ, ಫಕೀರಪ್ಪ ಮಳ್ಳಿ, ಸಂತೋಷ ಹನಮಸಾಗರ, ಮುತ್ತಪ್ಪ ನೂಲ್ಕಿ, ಗುಡ್ಡದಪ್ಪ ಗೋಡಿ, ಸದ್ದಾಂ ನೇಶಖಾನ, ವಿನಾಯಕ ಕಟ್ಟಿಮನಿ, ಆರೋಗ್ಯ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-23-932372174

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.