ನರೇಗಲ್: ನೂತನ ಸಚಿನ ಸಂಪುಟದಲ್ಲಿ ಶಾಸಕ ಜಿ.ಎಸ್.ಪಾಟೀಲ ಅವರಿಗೆ ಸ್ಥಾನ ನೀಡದಿದ್ದರೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂಬ ಎಚ್ಚರಿಕೆ ಸಂದೇಶವನ್ನು ಪಟ್ಟಣದಲ್ಲಿ ಸೋಮವಾರ ನಡೆದ ನರೇಗಲ್ ಬ್ಲಾಕ್ ಕಾಂಗ್ರೆಸ್ ಮುಖಂಡರ ಸಭೆ ಮೂಲಕ ಹೈಕಮಾಂಡ್ಗೆ ರವಾನೆ ಮಾಡಲಾಯಿತು.

ನರೇಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಬೆಟಗೇರಿ ಮಾತನಾಡಿ, ‘ನಾಲ್ಕು ಬಾರಿ ಶಾಸಕರಾಗಿ, ವಿವಿಧ ನಿಗಮ–ಮಂಡಳಿಗಳ ಅಧ್ಯಕ್ಷರಾಗಿ, ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷಕ್ಕೆ ಜಿ.ಎಸ್. ಪಾಟೀಲರು ಅಪಾರ ಕೊಡುಗೆ ನೀಡಿದ್ದಾರೆ. ಅವರ ಸೇವೆ, ಹಿರಿತನ ಆಧರಿಸಿ ಸಚಿವ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿದರು.

ಗಜೇಂದ್ರಗಡ ತಾಲ್ಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮೈಲಾರಪ್ಪ ವೀ. ಚಳ್ಳಮರದ ಮಾತನಾಡಿ, ‘ಉತ್ತಮ ಕೆಲಸಗಳನ್ನು ಮಾಡಿರುವ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡುತ್ತಾ ಬರಲಾಗಿದೆ. ಈಗಲಾದರೂ ಸಚಿವ ಸ್ಥಾನಕ್ಕೆ ಅವರನ್ನು ಆಯ್ಕೆ ಮಾಡಬೇಕು’ ಎಂದು ಒತ್ತಾಯಿಸಿದರು.

ಪಕ್ಷದ ಮುಖಂಡರಾದ ನಿಂಗನೌಡ ಲಕ್ಕನಗೌಡ್ರ, ಅಲ್ಲಾಬಕ್ಷಿ ನದಾಫ್, ಸಂತೋಷ ಹನಮಸಾಗರ, ಶೇಖಪ್ಪ ಜುಟ್ಲ, ಗುಡದಪ್ಪ ಗೋಡಿ, ಮುತ್ತಪ್ಪ ನೂಲ್ಕಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-23-488568294

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.